

ಬೆಂಗಳೂರು: ವಿಜಯನಗರ ಜಿಲ್ಲೆಯ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಡಾ.ಎಂ.ಮುನಿರಾಜು ಅವರನ್ನು ನೇಮಕ ಮಾಡಿ ರಾಜ್ಯಪಾಲರು ಆದೇಶಿಸಿದ್ದಾರೆ.
ಈ ವಿಶ್ವವಿದ್ಯಾಲಯದ ಕುಲಪತಿಯಾಗಿದ್ದ ಪ್ರೊ.ಮೇತ್ರಿ ಅವರ ನೇಮಕಾತಿಯನ್ನು ಪ್ರಶ್ನಿಸಿದ್ದ ಪ್ರಕರಣದಲ್ಲಿ ರಾಜ್ಯ ಹೈಕೋರ್ಟ್ ಅವರ ನೇಮಕಾತಿ ಆದೇಶವನ್ನು ರದ್ದುಪಡಿಸಿ ಶೋಧನಾ ಸಮಿತಿ ಮೂಲಕ ಅಂತಿಮಗೊಳಿಸಿದ್ದ ಅರ್ಜಿಗಳನ್ನು ಪುನರ್ ಪರಿಶೀಲಿಸಿ ಅರ್ಹರನ್ನು ಕುಲಪತಿ ಸ್ಥಾನಕ್ಕೆ ಪರಿಗಣಿಸಲು ಆದೇಶ ನೀಡಿತ್ತು.
ಅದರಂತೆ ಸರ್ಕಾರದ ಅಭಿಪ್ರಾಯ ಹಾಗೂ ಅರ್ಹತಾ ಮಾದನಂಡಗಳನ್ನು ಅನುಸರಿಸಿ ಡಾ.ಎಂ.ಮುನಿರಾಜು ಅವರನ್ನು ನೂತನ ಕುಲಪತಿಯಾಗಿ ರಾಜ್ಯಪಾಲರು ಮುಂದಿನ ನಾಲ್ಕು ವರ್ಷಗಳ ಅವಧಿಗೆ ಅಥವಾ 67 ವರ್ಷ ಪೂರೈಸುವವರೆಗೆ ಅನ್ವಯಿಸಿ ನೇಮಕ ಮಾಡಿದ್ದಾರೆ.
ಬೆಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ವಿಭಾಗದ ಪ್ರಾಧ್ಯಾಪಕರಾಗಿದ್ದ ಡಾ.ಎಂ.ಮುನಿರಾಜು ಈ ಹಿಂದೆ ಬೆಂ.ವಿವಿಯ ಹಂಗಾಮಿ ಕುಲಪತಿಯಾಗಿ ಕಾರ್ಯನಿರ್ವಹಿಸಿದ್ದರು.