More

    ಪರಿಶಿಷ್ಟ ಜಾತಿ ಕಲ್ಯಾಣಕ್ಕೆ ಮೀಸಲಿರಿಸಿದ ಅನುದಾನ ಅಕ್ಕನಾಗಲಾಂಬಿಕೆ ಸಮುದಾಯ ಭವನ ನಿರ್ಮಾಣಕ್ಕೆ ಬಳಕೆ

    ತರೀಕೆರೆ: ಪರಿಶಿಷ್ಟ ಜಾತಿ ಕಲ್ಯಾಣಕ್ಕೆ ಮೀಸಲಿರಿಸಿದ್ದ 2.5 ಕೋಟಿ ರೂ.ಅನುದಾನವನ್ನು ಪಟ್ಟಣದ ಅಕ್ಕನಾಗಲಾಂಬಿಕೆ ಗದ್ದುಗೆ ಸಮೀಪ ನಿರ್ಮಾಣಗೊಂಡಿರುವ ಸಮುದಾಯ ಭವನಕ್ಕೆ ವಿನಿಯೋಗಿಸಿಕೊಳ್ಳಲಾಗಿದೆ ಎಂದು ಡಾ. ಬಿ.ಆರ್.ಅಂಬೇಡ್ಕರ್ ಪೀಪಲ್ ಪಾರ್ಟಿ ರಾಜ್ಯಯುವ ಘಟಕದ ಅಧ್ಯಕ್ಷ ಸಿ.ಎಂ.ಕೃಷ್ಣ ಆರೋಪಿಸಿದರು.
    ಸೋಮವಾರ ಪಟ್ಟಣದ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಎಸಿ ಡಾ. ಕಾಂತರಾಜ್ ಅಧ್ಯಕ್ಷತೆಯಲ್ಲಿ ಏರ್ಪಡಿಸಿದ್ದ ಉಪ ವಿಭಾಗೀಯ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ನಿಯಂತ್ರಣ ಸಮಿತಿ ಸಭೆಯಲ್ಲಿ ಮಾತನಾಡಿ, ಎಸ್‌ಸಿಪಿ, ಟಿಎಸ್‌ಪಿ ಯೋಜನೆ ಅನುದಾನವನ್ನು ಅಕ್ಕನಾಗಲಾಂಬಿಕೆ ಗದ್ದುಗೆ ಜೀರ್ಣೋದ್ಧಾರ ಸಮಿತಿ ಹಾಗೂ ಜನಪ್ರತಿನಿಧಿಗಳು ದುರುಪಯೋಗಪಡಿಸಿಕೊಂಡಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
    ಕರ್ನಾಟಕ ದಲಿತ ಸಂಘರ್ಷ ಸಮಿತಿ ವಿಭಾಗೀಯ ಸಂಘಟನಾ ಸಂಚಾಲಕ ಎನ್.ವೆಂಕಟೇಶ್ ಮಾತನಾಡಿ, ತಾಲೂಕಿನ ಹೊಸಳ್ಳಿ ಗ್ರಾಮದ ಸರ್ವೇ ನಂಬರ್ 34ರಲ್ಲಿ ಬೌದ್ಧ ವಿಹಾರ ನಿರ್ಮಾಣಕ್ಕೆ ಜಾಗ ಮೀಸಲಿರಿಸಬೇಕು ಎಂದು ಆಗ್ರಹಿಸಿದರು.
    ತಹಸೀಲ್ದಾರ್ ಸಿ.ಎಸ್.ಪೂರ್ಣಿಮಾ ಪ್ರತಿಕ್ರಿಯಿಸಿ, ದ್ಯಾಂಪುರ ಸರ್ವೇ ನಂ.13ರಲ್ಲಿ ಬೌದ್ಧ ವಿಹಾರಕ್ಕೆ ಬೇಕಾದ 5ರಿಂದ 10 ಎಕರೆ ಜಾಗ ಮೀಸಲಿಡಲು ಪ್ರಸ್ತಾವನೆ ಪ್ರಗತಿ ಹಂತದಲ್ಲಿದೆ ಎಂದು ಸಭೆ ಗಮನಕ್ಕೆ ತಂದರು. ಛಲವಾದಿ ಸಮಾಜದ ತಾಲೂಕು ಅಧ್ಯಕ್ಷ ಎಸ್.ಕೆ.ಸ್ವಾಮಿ ಮಾತನಾಡಿ, ಎಚ್.ರಂಗಾಪುರ ಸರ್ವೇ ನಂ13ರಲ್ಲಿ ದಲಿತರ ಸ್ಮಶಾನಕ್ಕೆ ಜಾಗ ಕಾಯ್ದಿರಿಸಬೇಕು ಎಂದು ಒತ್ತಾಯಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts