ಗುರುವೆಂಬ ಪರಬ್ರಹ್ಮ ಮಕ್ಕಳ ಬದುಕಿಗೆ ದೀವಿಗೆ

gan (8)
Published on

ಕುಂದಾಪುರ: ಬ್ರಹ್ಮ ಜಗತ್ತನ್ನು ಸೃಷ್ಟಿಸುತ್ತಾನೆ. ನಂತರ, ಗುರುವೆಂಬ ಪರಬ್ರಹ್ಮ ಮಕ್ಕಳ ಬದುಕಿಗೆ ದೀವಿಗೆಯಾಗುತ್ತಾನೆ. ನಮ್ಮ ಬದುಕಿನಲ್ಲಿ ಹೆತ್ತ ತಾಯಿ ಮೊದಲ ಗುರು. ಸತ್ಯ, ಧರ್ಮ, ನ್ಯಾಯ ನೀತಿಯ ಬಗ್ಗೆ ಮನೆಯಲ್ಲಿ ಮಕ್ಕಳಿಗೆ ತಿಳಿಸಿ ಕೊಡುವವಳು ತಾಯಿ. ತದನಂತರ ಮಕ್ಕಳ ಭವಿಷ್ಯ ಶಿಕ್ಷಕರ ಕೈಯಲ್ಲಿರುತ್ತದೆ ಎಂದು ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ಡಾ.ವಾಧವಿ ಎಸ್. ಭಂಡಾರಿ ಹೇಳಿದರು.

ಯಡಾಡಿ ಮತ್ಯಾಡಿಯಲ್ಲಿರುವ ಸುಜ್ಞಾನ ಪದವಿಪೂರ್ವ ಕಾಲೇಜು ಹಾಗೂ ವಿದ್ಯಾರಣ್ಯ ಆಂಗ್ಲ ವಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ನಿಮಿತ್ತ ಶನಿವಾರ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಗುರುವಂದನೆ ಸ್ವೀಕರಿಸಿ ವಾತನಾಡಿದರು.

ವಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ವಾತನಾಡಿ, ಶಿಕ್ಷಕರನ್ನು ಶಿಲ್ಪಿಗಳೆಂದು ಕರೆಯುತ್ತಾರೆ. ಸವಾಜವನ್ನು ತಿದ್ದುವವರು ಶಿಕ್ಷಕರು. ತಾವು ಕಲಿಸಿದ ವಿದಾರ್ಥಿಗಳು ಉನ್ನತ ಸ್ಥಾನಕ್ಕೆ ಹೋದಾಗ ಹೆತ್ತವರಿಗಿಂತ ಹೆಚ್ಚು ಖುಷಿ ಪಡುವವರು ಶಿಕ್ಷಕರೇ ಆಗಿರುತ್ತಾರೆ. ಇಂದಿನ ಮಕ್ಕಳು ಸೋಶಿಯಲ್ ಮೀಡಿಯಾಕ್ಕೆ ಜೋತು ಬಿದ್ದಿದ್ದಾರೆ. ಶಿಕ್ಷಕರು ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸಲು ಪ್ರೇರೇಪಿಸಬೇಕು ಎಂದರು.

ಸಂಸ್ಥೆ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ ಮತ್ತು ಖಜಾಂಚಿ ಭರತ್ ಶೆಟ್ಟಿ ವಾತನಾಡಿದರು. ಕಾರ್ಯಕ್ರಮದಲ್ಲಿ ಡಾ.ವಾಧವಿ ಎಸ್. ಭಂಡಾರಿ ಅವರನ್ನು ಗೌರವಿಸಲಾಯಿತು. ಸಂಸ್ಥೆ ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಪ್ರಾಂಶುಪಾಲ ರಂಜನ್ ಬಿ.ಶೆಟ್ಟಿ, ಮುಖ್ಯಶಿಕ್ಷಕ ಪ್ರದೀಪ್ ಕೆ. ಉಪಸ್ಥಿತರಿದ್ದರು. ರಜತ್ ಭಟ್ ನಿರೂಪಿಸಿದರು.

10 ಲಕ್ಷ ರೂ. ಧನ ಸಹಾಯ

ಅಗಲಿದ ಶಿಕ್ಷಕ ಸಂತೋಷ್ ಕುಟುಂಬಕ್ಕೆ 10 ಲಕ್ಷ ರೂ. ಧನ ಸಹಾಯ ನೀಡುವ ಮೂಲಕ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಹೃದಯ ವೈಶಾಲ್ಯತೆ ಮೆರೆಯಿತು. ಧನ ಸಹಾಯವನ್ನು ಸಂತೋಷ್ ಅವರ ಪತ್ನಿ ಜಯಶ್ರೀ ಅವರ ಹೆಸರಿನಲ್ಲಿ ಠೇವಣಿ ಇಡಲಾಯಿತು. ಸಂತೋಷ್ ಅವರ ಅಗಲಿಕೆ ವಿದ್ಯಾಸಂಸ್ಥೆಗೆ ಹಾಗೂ ಈ ಸವಾಜಕ್ಕೆ ತುಂಬಲಾರದ ನಷ್ಟವಾಗಿದೆ. ಅವರದ್ದು ಬೆಲೆ ಕಟ್ಟಲಾಗದ ವ್ಯಕ್ತಿತ್ವ. ಅವರ ಕುಟುಂಬದ ಜತೆ ಸಂಸ್ಥೆ ಸದಾ ಇರುತ್ತದೆ ಎಂಬ ಭರವಸೆ ನೀಡಿದೆ. ಈ ನಿಟ್ಟಿನಲ್ಲಿ ಶಾಲೆ ಆಡಳಿತ ಮಂಡಳಿ, ಶಿಕ್ಷಕರು, ಉಪನ್ಯಾಸಕರು ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪಾಲಕರು ಒಗ್ಗೂಡಿ ಈ ದೊಡ್ಡ ಮೊತ್ತವನ್ನು ಸಂಗ್ರಹಿಸಿದ್ದಾರೆ. ಇದು ಶಿಕ್ಷಕರ ಮೇಲಿದ್ದ ಗೌರವ ಮತ್ತು ವಾನವೀಯತೆಯ ಪ್ರತೀಕವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net