ಹಿರಿಯರ ಶ್ರಮ ಸಾರ್ಥಕ

amrutha
Published on

ಗಂಗೊಳ್ಳಿ: ಬಂಟ್ವಾಡಿಯ ನ್ಯೂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸಾಗಿಬಂದ ಹಾದಿ ಅದ್ಭುತ. ಗ್ರಾಮೀಣ ಪ್ರದೇಶದಲ್ಲಿ ಶಾಲೆ ಪ್ರಾರಂಭಿಸಿದ ಈ ಭಾಗದ ಹಿರಿಯರ ಶ್ರಮ ಸಾರ್ಥಕ ಎಂದು ನಿವೃತ್ತ ಮುಖ್ಯ ಶಿಕ್ಷಕ ಚಂದ್ರಶೇಖರ ಶೆಟ್ಟಿ ಹೇಳಿದರು.

ಸೇನಾಪುರ ಗ್ರಾಮದ ಬಂಟ್ವಾಡಿ ನ್ಯೂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವದ ಅಮೃತ ಸಮ್ಮಿಲನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಶ್ರೀಕಾಂತ ಶ್ಯಾನುಭಾಗ್ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಗುರುರಾಜ್ ಗಂಟಿಹೊಳೆ, ಉದ್ಯಮಿ ಮಂಜುನಾಥ ಪೂಜಾರಿ ಸೇನಾಪುರ, ವಾಗ್ಮಿ ಓಂ ಗಣೇಶ ಉಪ್ಪುಂದ, ಶಾಲೆ ಸಂಚಾಲಕ, ಅಮೃತ ಮಹೋತ್ಸವ ಸಮಿತಿ ಗೌರವಾಧ್ಯಕ್ಷ ಬಿ.ಅರುಣ್ ಕುಮಾರ್ ಶೆಟ್ಟಿ, ವಂಡ್ಸೆ ನಾಡ ಕಚೇರಿ ಉಪ ತಹಸೀಲ್ದಾರ್ ಶೈಲಜಾ ಎಸ್.ಹೆಗ್ಡೆ, ತಾಪಂ ಮಾಜಿ ಸದಸ್ಯ ಪ್ರಭು ಕೆನಡಿ ಪಿರೇರಾ ಶುಭಹಾರೈಸಿದರು. ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಭಿನಂದನ ಎ.ಶೆಟ್ಟಿ, ವಿಶೇಷ ಸಾಧಕ ಹಳೇ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ನಾರಾಯಣ ಶೆಟ್ಟಿ, ಕೆ.ಜಯಪ್ರಕಾಶ ಶೆಟ್ಟಿ, ಮುಖ್ಯ ಶಿಕ್ಷಕ ಶ್ರೀಧರ ಆಚಾರ್ಯ, ಹಳೇ ವಿದ್ಯಾರ್ಥಿ ಸಂಘ ಅಧ್ಯಕ್ಷ ನರಸಿಂಹ ಮೊಗವೀರ ಉಪಸ್ಥಿತರಿದ್ದರು. ಅರುಣ್ ಹಕ್ಲಾಡಿ ಸ್ವಾಗತಿಸಿದರು. ಶಂಭು ಗುಡ್ಡಮ್ಮಾಡಿ ವಂದಿಸಿದರು. ಚಂದ್ರಶೇಖರ ಶೆಟ್ಟಿ ಬಂಟ್ವಾಡಿ ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net