More

    ಹೆದ್ದಾರಿ ಮಾರ್ಗ ಬದಲಾವಣೆಗೆ ನಕಾರ ಅಧಿಕಾರಿಗಳ ನಿರ್ಧಾರದಲ್ಲಿ ಹಸ್ತಕ್ಷೇಪವಿಲ್ಲ ಹೈಕೋರ್ಟ್

    ಬೆಂಗಳೂರು : ರಸ್ತೆಗಳನ್ನು ಅಭಿವೃದ್ಧಿಗೊಳಿಸುವ ಯೋಜನೆಗಳನ್ನು ರೂಪಿಸುವುದು ಸರ್ಕಾರದ ಕರ್ತವ್ಯ. ಅದರ ಮಾರ್ಗ ಹೇಗಿರಬೇಕು ಎಂಬ ಕುರಿತಾಗಿ ನ್ಯಾಯಾಲಯ ಯಾವುದೇ ರೀತಿಯ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ.

    ರಾಷ್ಟ್ರೀಯ ಹೆದ್ದಾರಿಯನ್ನು ತಮ್ಮ ಜಮೀನಿನಲ್ಲಿ ಹಾದು ಹೋಗುವಂತೆ ನಿರ್ಮಿಸಲಾಗುತ್ತಿದ್ದು, ರಸ್ತೆ ಅಭಿವೃದ್ಧಿ ಯೋಜನೆಯ ಮಾರ್ಗ ಬದಲಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ನಿರ್ದೇಶಿಸುವಂತೆ ಕೋರಿ ಕೊಪ್ಪಳ ಜಿಲ್ಲೆ ಯಲಬುರ್ಗಾದ ಈರಣ್ಣ ಮತ್ತು ಸಿದ್ದರಾಮೇಶ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯಪೀಠ ವಿಚಾರಣೆ ನಡೆಸಿತು.

    ರಸ್ತೆಗಳ ಅಭಿವೃದ್ಧಿ, ಅವುಗಳ ಅಳ, ಅಗಲ, ಉದ್ದ ಮತ್ತು ಅದರ ವಿನ್ಯಾಸ ಮತ್ತಿತರ ಅಂಶಗಳನ್ನು ಸರ್ಕಾರ ನಿರ್ಧರಿಸಲಿದೆ. ಅದು ಅವರ ಕೆಲಸವೂ ಹೌದು. ಆ ಕ್ಷೇತ್ರ ನ್ಯಾಯಾಂಗಕ್ಕೆ ಅನ್ಯಗ್ರಹವಿದ್ದಂತೆ. ನ್ಯಾಯಾಲಯ ಅಂತಹ ವಿಚಾರಗಳಲ್ಲಿ ಯಾವುದೇ ನಿರ್ದೇಶನ ನೀಡಲಾಗದು ಎಂದು ತಿಳಿಸಿತು.

    ಅಲ್ಲದೆ, ಇಂತಹ ವಿಚಾರಗಳಲ್ಲಿ ನ್ಯಾಯಾಲಯಗಳು ಸಾಮಾನ್ಯವಾಗಿ ಅಧಿಕಾರಿಗಳ ನಿರ್ಧಾರಗಳಲ್ಲಿ ಹಸ್ತಕ್ಷೇಪಗಳನ್ನು ಮಾಡುವುದಿಲ್ಲ. ಆದರೆ, ಆ ನಿರ್ಧಾರಗಳು ಏಕಪಕ್ಷೀಯವಾಗಿ ಅಥವಾ ಮೂಲಭೂತ ಹಕ್ಕುಗಳ ಉಲ್ಲಂಘನೆ ಆಗಿದ್ದ ಸಂದರ್ಭಗಳಲ್ಲಿ ಮಾತ್ರ ಮಧ್ಯಪ್ರವೇಶ ಮಾಡುತ್ತದೆ ಎಂದು ನ್ಯಾಯಪೀಠ ಹೇಳಿತು.

    ಅರ್ಜಿಯಲ್ಲಿ ಏನಿದೆ?
    ಅರ್ಜಿದಾರರು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ತಮ್ಮ ಕೃಷಿ ಭೂಮಿಯಲ್ಲಿ ಹಾದು ಹೋಗುವಂತೆ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಮಿಸುತ್ತಿದೆ. ಜತೆಗೆ ಮಾರ್ಗವನ್ನು ತಪ್ಪಾಗಿ ಯೋಜಿಸಲಾಗಿದೆ ಹಾಗೂ ಇದು ಯೋಜನಾ ನಿಯಮಗಳಿಗೆ ವಿರುದ್ಧವಾಗಿದೆ. ಹೀಗಾಗಿ ರಸ್ತೆ ಅಭಿವೃದ್ಧಿ ಯೋಜನೆಯ ಮಾರ್ಗ ಬದಲಿಸುವಂತೆ ನಿರ್ದೇಶನ ನೀಡಬೇಕು ಎಂದು ನ್ಯಾಯಾಲಯದ ಮೊರೆ ಹೋಗಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts