More

    ದರ್ಗಾ ನವೀಕರಣಕ್ಕೆ ಕೆಡವಿದಾಗ ಸಿಕ್ತು ಹಿಂದೂ ದೇವಾಲಯ!

    ಮಂಗಳೂರು: ನವೀಕರಣಕ್ಕಾಗಿ ದರ್ಗಾ ಕೆಡವಿದಾಗ ಹಿಂದೂ ಶೈಲಿಯ ದೇವಸ್ಥಾನದ ಗುಡಿ ಪತ್ತೆಯಾಗಿದೆ. ಮಂಗಳೂರು ಹೊರವಲಯದ ಗಂಜಿಮಠ ಬಳಿಯ ಮಳಲಿ ಎಂಬಲ್ಲಿ ದರ್ಗಾದ ನವೀಕರಣದ ಸಲುವಾಗಿ ಮುಂಭಾಗ ಕೆಡವಲಾಗಿತ್ತು. ಈ ವೇಳೆ ಹಿಂದೂ ಕಲಾಕೃತಿಗಳು ಕಂಡುಬಂದಿವೆ.

    ಮಳಲಿಯ ಅಸಯ್ಯಿದ್ ಅಬ್ದುಲ್ಲಾಹಿಲ್ ಮದನಿ ದರ್ಗಾದ ಹಿಂಭಾಗ ದೇವಸ್ಥಾನದ ಕಲಶ, ತೋಮರ, ಕಂಬಗಳ ಮಾದರಿ ಪತ್ತೆಯಾಗಿವೆ. ಜೈನ ಅಥವಾ ಹಿಂದೂ ಧರ್ಮಕ್ಕೆ ಸೇರಿದ ದೇವಸ್ಥಾನವಿರುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗಿದೆ.

    ಮಂಗಳೂರು ತಹಶೀಲ್ದಾರ್ ಪುರಂದರ, ವಿಶ್ವಹಿಂದೂಪರಿಷತ್ ಪ್ರಮುಖರು ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರು ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

    ಈ ವೇಳೆ ಜಾಗದ ದಾಖಲೆ ಹಾಗೂ ಇತಿಹಾಸದ ಬಗ್ಗೆ ಮಾಹಿತಿ ಕಲೆ ಹಾಕಲು ತಹಶೀಲ್ದಾರ್ ಮುಂದಾಗಿದ್ದು, ಸದ್ಯ ದರ್ಗಾದ ನವೀಕರಣ ಕಾಮಗಾರಿ ಸ್ಥಗಿತಕ್ಕೆ ತಹಶಿಲ್ದಾರ್ ಸೂಚನೆ ನೀಡಿದ್ದಾರೆ. ದರ್ಗಾ ಆಡಳಿತ ಕೂಡ ಕೆಲಸ ನಿಲ್ಲಿಸುವುದಾಗಿ ಹೇಳಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts