More

    ‘ನೀರಾವರಿ ಅಕ್ರಮ ಆರೋಪದಲ್ಲಿ ಹುರುಳಿಲ್ಲ, ತನಿಖೆ ಬೇಕಾಗಿಲ್ಲ’ ಎಂದ ಗೃಹ ಸಚಿವರು

    ಬೆಂಗಳೂರು: ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಗುತ್ತಿಗೆ ನೀಡಲೆಂದು ಕರೆದಿರುವ ಟೆಂಡರ್ ಪ್ರಕ್ರಿಯೆ ಪಾರದರ್ಶಕವಾಗಿದೆ. ಹಿಂದಿನ ಸರ್ಕಾರಗಳು ಅನುಸರಿಸಿದ ಕೆಟಿಪಿಪಿ ಕಾಯ್ದೆಯಡಿ ಕ್ರಮವಹಿಸಿದ್ದು, ಪ್ರತಿಪಕ್ಷಗಳ ಆರೋಪದಲ್ಲಿ ಹುರುಳಿಲ್ಲ, ತನಿಖೆ ಅನಗತ್ಯವೆಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ‌ ಸಾರಾಸಗಟಾಗಿ ತಳ್ಳಿಹಾಕಿದರು.

    ಸುದ್ದಿಗಾರರಿಗೆ ಭಾನುವಾರ ಪ್ರತಿಕ್ರಿಯಿಸಿದ ಅವರು, ಟೆಂಡರ್ ಅಕ್ರಮ ಆಪಾದನೆ ಕೇಳಿ ಬಂದ ತಕ್ಷಣವೇ ಜಲ ಸಂಪನ್ಮೂಲ ಇಲಾಖೆ ಕಾರ್ಯದರ್ಶಿ ದಾಖಲೆಗಳ ಸಹಿತ ಸತ್ಯಾಂಶ ಬಹಿರಂಗಪಡಿಸಿದ್ದಾರೆ. ಪ್ರತಿಪಕ್ಷಗಳು ಆರೋಪ ಮಾಡುವುದು ಸಹಜ. ಆದರೆ ಪ್ರಕ್ರಿಯೆ ಪಾರದರ್ಶಕತೆ ಹೊಂದಿರುವುದು ಜಗಜ್ಜಾಹೀರಾಗಿರುವ ಕಾರಣ ತನಿಖೆ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದರು.

    ಬೆಲ್ಲದ್ ಪ್ರಕರಣ ತನಿಖೆ
    ಶಾಸಕ ಅರವಿಂದ ಬೆಲ್ಲದ್ ಅವರ ಫೋನ್ ಕದ್ದಾಲಿಕೆ ಪ್ರಕರಣದ ತನಿಖೆ ನಡೆಯುತ್ತಿದೆ. ಬೆಲ್ಲದ್ ಜತೆಗೆ ತನಿಖಾಧಿಕಾರಿ ಮಾತನಾಡಿದ್ದಾರೆ ಎಂದು ಬೊಮ್ಮಾಯಿ‌ ಸ್ಪಷ್ಟಪಡಿಸಿದರು.

    ಸಂಕಷ್ಟದಲ್ಲಿ ಅವಳೇ ನನ್ ಹೆಂಡ್ತಿ ಚಿತ್ರದ ನಿರ್ದೇಶಕ! ದಾನಿಗಳ ನಿರೀಕ್ಷೆಯಲ್ಲಿ ಡೈರೆಕ್ಟರ್

    ಗಂಡನೊಂದಿಗೆ ಫೋನ್​ನಲ್ಲಿ ಮಾತನಾಡುತ್ತಾ ಹೊರಹೋದವಳು ದೂರದ ರೈಲ್ವೆ ಹಳಿ ಬಳಿ ಮಾಂಸವಾಗಿ ಪತ್ತೆ!

    ಶಿಕ್ಷಕಿಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ ವ್ಯಕ್ತಿ! ಆಕೆಯ ಟಾರ್ಚರ್​ ತಾಳಲಾರದೆ ಆತ್ಮಹತ್ಯೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts