ಸಿಡಿಲು ಬಡಿದು ಮನೆಗೆ ಹಾನಿ

Thunder bolt
Published on

ಸುಬ್ರಹ್ಮಣ್ಯ: ಮನೆಗೆ ಸಿಡಿಲು ಬಡಿದು ಹಾನಿ ಸಂಭವಿಸಿದ ಘಟನೆ ಕಡಬ ಬಿಳಿನೆಲೆ ಗ್ರಾಮದ ಕೈಕಂಬ ಬಾಲಡ್ಕದಲ್ಲಿ ಸೋಮವಾರ ಸಂಜೆ ಸಂಭವಿಸಿದೆ. ಬಿಳಿನೆಲೆ ಗ್ರಾಮದ ಕೈಕಂಬ ಬಾಲಡ್ಕ ಯಶೋದಾ ಎಂಬುವರ ಮನೆಗೆ ಸಿಡಿಲು ಬಡಿದಿದ್ದು, ಪರಿಣಾಮವಾಗಿ ಮನೆಯ ಕಿಟಕಿ, ವಿದ್ಯುತ್ ಸ್ವಿಚ್ ಬೋರ್ಡ್ ಹಾಗೂ ಮನೆಯ ಗೋಡೆಗೆ ಹಾನಿಯಾಗಿದ್ದು, ಅಪಾರ ನಷ್ಟ ಸಂಭವಿಸಿದೆ. ಮನೆಯವರು ಅಪಾಯದಿಂದ ಪಾರಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net