More

    ತಾಲೂಕು ಆಡಳಿತದ ಕಾರ್ಯವೈಖರಿಗೆ ಉಸ್ತುವಾರಿ ಕಾರ್ಯದರ್ಶಿ ಬೇಸರ

    ಚಿಕ್ಕಮಗಳೂರು: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದ್ರಕುಮಾರ್ ಕಟಾರಿಯಾ ಬುಧವಾರ ಬೆಳಗ್ಗೆ ಚಿಕ್ಕಮಗಳೂರು ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ, ಪ್ರತಿ ಕೊಠಡಿಯನ್ನೂ ವೀಕ್ಷಣೆ ಮಾಡಿ ತಾಲೂಕು ಆಡಳಿತದ ಕಾರ್ಯವೈಖರಿಗೆ ಬೇಸರ ವ್ಯಕ್ತಪಡಿಸಿದರು.
    ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಡತಗಳ ಡಿಜಿಟಲೀಕರಣ ಕಾರ್ಯ ಈಗಾಗಲೇ ಆರಂಭವಾಗಿದ್ದು, ರಾಜ್ಯದ 31 ಜಿಲ್ಲೆಗಳಲ್ಲಿಯೂ ಜಿಲ್ಲೆಗೊಂದರಂತೆ ಕೇಂದ್ರ ಸ್ಥಾಪಿಸಿ ಕಡತಗಳನ್ನು ಸ್ಕಾೃನ್ ಮಾಡಿ ಡಿಜಿಟಲ್‌ವಾಲೆಟ್‌ನಲ್ಲಿ ಇಡುವ ವ್ಯವಸ್ಥೆ ಮಾಡಲಾಗುವುದು ಎಂದರು.
    ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ರಾಜ್ಯಾದ್ಯಂತ ಎಲ್ಲ ಇಲಾಖೆಗಳಿಗೂ ಇ-ಆಫೀಸ್‌ಗಳನ್ನು ವಿಸ್ತರಿಸಲಾಗುವುದು. ಅಲ್ಲದೆ ಕೆಲ ಖಾಸಗಿ ವ್ಯಕ್ತಿಗಳು ರೆಕಾರ್ಡ್ ರೂಮ್‌ಗಳಿಗೆ ಬಂದು ಕಡತದಲ್ಲಿನ ದಾಖಲಾತಿ ತಿದ್ದುವುದು, ನಕಲಿ ದಾಖಲೆ ಸೃಷ್ಟಿಸಿರುವ ಕುರಿತು ಸಾಕಷ್ಟು ದೂರುಗಳು ಬಂದಿವೆ. ಇದನ್ನು ತಡೆಯಲು ಎಲ್ಲ ದಾಖಲೆಗಳನ್ನು ಇ-ಆಫೀಸ್ ಮೂಲಕ ಡಿಜಿಟಲೀಕರಣ ಮಾಡಲು ಮುಂದಾಗಿದ್ದೇವೆ ಎಂದು ತಿಳಿಸಿದರು.
    ಎಲ್ಲ ಕಚೇರಿಗಳ ಲಕ್ಷಾಂತರ ಫೈಲ್ ಸ್ಕಾೃನ್ ಮಾಡಲು ಸಿಬ್ಬಂದಿ ಕೊರತೆ ಇದೆ. ಹಾಗಾಗಿ ಟೆಂಡರ್ ಕರೆದು ಆ ಮೂಲಕ ಶೀಘ್ರವಾಗಿ ಎಲ್ಲ ಕಡತಗಳನ್ನು ಸ್ಕ್ಯಾನ್ ಮಾಡಿಸಲಾಗುವುದು. ಈ ಕುರಿತು ಈಗಾಗಲೇ ಸೂಚನೆ ನೀಡಲಾಗಿದೆ. ಚಿಕ್ಕಮಗಳೂರು ತಾಲೂಕು ಕಚೇರಿಯಲ್ಲಿ ಸ್ಕ್ಯಾನಿಂಗ್ ಕಾರ್ಯ ಆಮೆಗತಿಯಲ್ಲಿ ನಡೆಯುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸಿದರು.
    ಜಿಲ್ಲಾಧಿಕಾರಿ ಮೀನಾ ನಾಗರಾಜ್, ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕ ರಡ್ಡಿ, ಉಪವಿಭಾಗಾಧಿಕಾರಿ ದಲ್ಜಿತ್ ಕುಮಾರ್, ತಹಸೀಲ್ದಾರ್ ಡಾ. ಸುಮಂತ್ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts