

ಪಡುಬಿದ್ರಿ: ಮಹತೋಭಾರ ಕಾಪು ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನದಲ್ಲಿ ಪ್ರಧಾನ ತಂತ್ರಿಗಳಾದ ಅನಂತರಾಮ ತಂತ್ರಿ ಕಲ್ಯ, ಕೆ.ಪಿ.ಶ್ರೀನಿವಾಸ ತಂತ್ರಿ ಮಡುಂಬು ನೇತೃತ್ವದಲ್ಲಿ ಪ್ರಧಾನ ಅರ್ಚಕ ನಾರಾಯಣ ತಂತ್ರಿ ಸಹಕಾರದಲ್ಲಿ ಬಿಂಬ ಪುನಃಪ್ರತಿಷ್ಠಾಪನಾ ವರ್ಧಂತ್ಯುತ್ಸವ ಗುರುವಾರ ಸಂಪನ್ನಗೊಂಡಿತು.
ಬೆಳಗ್ಗೆ ಜನಾರ್ದನ, ಮಹಾಗಣಪತಿ, ವೀರಾಂಜನೇಯ ದೇವರಿಗೆ ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಸಂಜೆ ದೊಡ್ಡ ರಂಗಪೂಜೆ, ವಸಂತ ಮಂಟಪದಲ್ಲಿ ದೇವರ ಸಮ್ಮುಖದಲ್ಲಿ ಯಕ್ಷಗಾನ ಬಯಲಾಟ ಸಹಿತ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.
ಮಹಾರಾಷ್ಟ್ರ ಶಾಸಕ ಸುನೀಲ್ ಪ್ರಭು ದಿಂಡೋಷಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯ್‌ಕುಮಾರ್ ಸೊರಕೆ, ಕಾಪು ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮನೋಹರ್ ಎಸ್.ಶೆಟ್ಟಿ ಕಾಪು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವೈ.ಶಶಿಧರ್ ಶೆಟ್ಟಿ ಎರ್ಮಾಳು, ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ, ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ನಾಗರಾಜ್ ಎಸ್,. ರವಿ ಕುಮಾರ್, ಸದಾನಂದ ಸುವರ್ಣ, ಶ್ರೀಕಾಂತ್ ಕಾಪು, ಅಶ್ವಿನಿ ಬಂಗೇರ, ಶಾಂತಲತಾ ಶೆಟ್ಟಿ, ಕಾಪು ಸಾವಿರ ಸೀಮೆಯ ಭಕ್ತರು ಪಾಲ್ಗೊಂಡಿದ್ದರು.