ಉತ್ತಮ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ಸಂಸ್ಥೆ ಸನ್ನದ್ಧ

nitte college
nitte college
Published on

ಕಾರ್ಕಳ: ವಿದ್ಯಾರ್ಥಿಗಳು ಓದಿಗೆ ಪ್ರಥಮ ಪ್ರಾಶಸ್ತ್ಯ ನೀಡುವುದು ಅತ್ಯಗತ್ಯ. ಕೌಶಲ್ಯತೆಯನ್ನು ಬೆಳೆಸಿಕೊಂಡು ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳನಷ್ಟೇ ಸಂಸ್ಥೆಗಳು ಉದ್ಯೋಗಿಯನ್ನಾಗಿ ಸೇರಿಸಿಕೊಳ್ಳಲು ಇಷ್ಟ ಪಡುತ್ತಾರೆ. ನಿಟ್ಟೆ ವಿದ್ಯಾಸಂಸ್ಥೆಯು ವಿದ್ಯಾರ್ಥಿಗಳನ್ನು ಈ ದೃಷ್ಟಿಯಲ್ಲಿ ಸಜ್ಜುಗೊಳಿಸಲು ಸದಾ ಸನ್ನದ್ಧವಾಗಿರುತ್ತದೆ ಎಂದು ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಾಧಿಪತಿ ಎನ್.ವಿನಯ ಹೆಗ್ಡೆ ಹೇಳಿದರು.

ನಿಟ್ಟೆಯ ಸದಾನಂದ ಸಭಾಂಗಣದಲ್ಲಿ ಸೋಮವಾರ ನಡೆದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಬಿ.ಟೆಕ್ ಕೋರ್ಸ್‌ಗಳಿಗೆ 2025ನೇ ಸಾಲಿನಲ್ಲಿ ಪ್ರವೇಶಾತಿ ಪಡೆದ ನೂತನ ಬ್ಯಾಚ್‌ನ ಎರಡನೇ ವಿದ್ಯಾರ್ಥಿ ಸಮೂಹದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ವೈಸ್‌ಚಾನ್ಸಲರ್ ಡಾ.ಎಂ.ಎಸ್.ಮೂಡಿತ್ತಾಯ ವಾತನಾಡಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಜಗತ್ತಿನಲ್ಲಿ ಹೇಗೆ ಸಿದ್ಧರಾಗಬೇಕು ಹಾಗೂ ಸವಾಲುಗಳನ್ನು ಎದುರಿಸುವ ಶಕ್ತಿ ಹಾಗೂ ಯುಕ್ತಿಯನ್ನು ಹೇಗೆ ಮೈಗೂಡಿಸಿಕೊಳ್ಳಬೇಕು ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ವಾರ್ಷಿಕ ಹೊತ್ತಗೆ ‘ನಿದರ್ಶನ-2025’ ಬಿಡುಗಡೆ ಮಾಡಲಾಯಿತು.

ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ತಾಂತ್ರಿಕ ಶಿಕ್ಷಣ ವಿಭಾಗದ ಉಪಾಧ್ಯಕ್ಷ ಪ್ರೊ.ಡಾ.ಗೋಪಾಲ್ ಮುಗೇರಾಯ ಉಪಸ್ಥಿತರಿದ್ದರು. ಪ್ರಾಂಶುಪಾಲ ಡಾ.ನಿರಂಜನ್ ಎನ್.ಚಿಪ್ಳೂಣ್ಕರ್ ಸ್ವಾಗತಿಸಿದರು. ಪ್ರಥಮ ವರ್ಷದ ಬಿ.ಟೆಕ್ ವಿದ್ಯಾರ್ಥಿಗಳ ಸಂಯೋಜಕ ಡಾ.ಜಾಯ್ ವಾರ್ಟಿಸ್ ವಂದಿಸಿದರು. ಸಹಾಯಕ ಪ್ರಾಧ್ಯಾಪಕಿ ಡಾ.ಹರ್ಷಿತಾ ಎಂ.ಜತ್ತನ್ನ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net