ದೆಹಲಿಯಲ್ಲಿ ಜ.1ರವರೆಗೆ ಪಟಾಕಿ ಮಾರಾಟ, ಉತ್ಪಾದನೆ ನಿಷೇಧಿಸಿದ ಕೇಜ್ರಿವಾಲ್ ಸರ್ಕಾರ

cr
Published on

ನವದೆಹಲಿ: ಮುಂಬರುವ ಚಳಿಗಾಲದಲ್ಲಿ ವಾಯು ಮಾಲಿನ್ಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪಟಾಕಿಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿ ದೆಹಲಿ ಸರ್ಕಾರ ಸೋಮವಾರ ಆದೇಶ ಮಾಡಿದೆ.

ಪಟಾಕಿಗಳ ಉತ್ಪಾದನೆ, ಸಂಗ್ರಹ, ಮಾರಾಟ ಮತ್ತು ಬಳಕೆ ಮೇಲಿನ ನಿಷೇಧವು 2025 ಜನವರಿ 1 ರವರೆಗೆ ಜಾರಿಯಲ್ಲಿರುತ್ತದೆ. ಅಲ್ಲದೆ, ಆನ್‌ಲೈನ್​ನಲ್ಲಿ ಮಾರಾಟ ಮತ್ತು ವಿತರಣೆಗೂ ಅವಕಾಶವಿಲ್ಲ ಎಂದು ಪರಿಸರ ಸಚಿವ ಗೋಪಾಲ್ ರೈ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪಟಾಕಿ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ದೆಹಲಿ ಪೊಲೀಸರು, ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ ಮತ್ತು ಕಂದಾಯ ಇಲಾಖೆಯೊಂದಿಗೆ ಸಮನ್ವಯದೊಂದಿಗೆ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲಾಗುವುದು ಎಂದು ಪರಿಸರ ಸಚಿವ ರೈ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net