More

    3 ದಿನ 35 ಕೋಟಿ ರೂ.; ಬಾಯ್ಕಾಟ್​ಗೆ ಬಗ್ಗದ, ಬ್ಯಾನ್​ಗೆ ಜಗ್ಗದ ‘ದಿ ಕೇರಳ ಸ್ಟೋರಿ’

    ಅದಾ ಶರ್ಮಾ ಅಭಿನಯದ, ಸುದೀಪ್ತೋ ಸೇನ್ ನಿರ್ದೇಶನದ ನೈಜ ಘಟನೆಯಾಧಾರಿತ ಸಿನಿಮಾ ‘ದಿ ಕೇರಳ ಸ್ಟೋರಿ’. ರಿಲೀಸ್​ಗೂ ಮುನ್ನ ಟೀಸರ್ ಮೂಲಕವೇ ವಿವಾದಕ್ಕೀಡಾದ ಚಿತ್ರವಿದು. ಕೇರಳದ 32 ಸಾವಿರಕ್ಕೂ ಅಧಿಕ ಯುವತಿಯರನ್ನು ಮತಾಂತರಿಸಿ, ಐಸಿಸ್ ಪರ ಹೋರಾಡಲು, ಸಿರಿಯಾ, ಇರಾಕ್, ಅಫ್ಘಾನಿಸ್ತಾನ ದೇಶಗಳಿಗೆ ಸಾಗಿಸಲಾಗಿದೆ ಎಂಬ ಸಂಭಾಷಣೆ ಹಲವರ ಅಸಮಾಧಾನಕ್ಕೆ ಕಾರಣವಾಗಿತ್ತು. ಇದೀಗ ರಿಲೀಸ್ ಬಳಿಕವೂ ಪ್ರತಿಭಟನೆ ಮುಂದುವರಿದಿದೆ.

    ಎಲ್ಲೆಲ್ಲಿ ವಿರೋಧ?: ಕೇರಳ ಸಿಎಂ ಪಿಣರಾಯಿ ವಿಜಯನ್, ‘ಇದು ಆರ್​ಎಸ್​ಎಸ್ ಪ್ರೇರಿತ, ಪ್ರಚಾರಕ್ಕಾಗಿ ಮಾಡಿರುವ ಸಿನಿಮಾ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದು, ಕೇರಳದ ಕಾಂಗ್ರೆಸ್ ಮುಖಂಡರು ಕೆಲವೆಡೆ ಪ್ರತಿಭಟನೆ ನಡೆಸಿದ್ದರು. ಮತ್ತೊಂದೆಡೆ ತಮಿಳು ನಾಡಿನಲ್ಲಿ ಮಲ್ಟಿಪ್ಲೆಕ್ಸ್, ಥಿಯೇಟರ್ ಮಾಲೀಕರು ಸ್ವಯಂಪ್ರೇರಿತರಾಗಿ ‘ದಿ ಕೇರಳ ಸ್ಟೋರಿ’ ಪ್ರದರ್ಶನ ಸ್ಥಗಿತಗೊಳಿಸಿದ್ದಾರೆ. ರಾಜ್ಯಾದ್ಯಂತ 13 ಥಿಯೇಟರ್​ಗಳಲ್ಲಿ ಮಾತ್ರ ಸಿನಿಮಾ ಪ್ರದರ್ಶಿಸಲಾಗುತ್ತಿದೆ. ಅದರ ನಡುವೆಯೇ ಸೋಮವಾರ (ಮೇ 8) ಪಶ್ಚಿಮ ಬಂಗಾಳದಲ್ಲಿ ಸಿನಿಮಾ ಬ್ಯಾನ್ ಮಾಡಲಾಗಿದೆ. ‘ದ್ವೇಷಪೂರಿತ ಘಟನೆಗಳನ್ನು ತಡೆಯಲು, ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಮುನ್ನೆಚ್ಚರಿಕಾ ಕ್ರಮವಾಗಿ ಚಿತ್ರವನ್ನು ನಿರ್ಬಂಧಿಸಲಾಗುವುದು’ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿಕೊಂಡಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ

    ಇತ್ತೀಚೆಗಷ್ಟೆ ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ, ‘ಭಯೋತ್ಪಾ ದಕರ ಪಿತೂರಿಗಳನ್ನು ಹೊರತರುವಲ್ಲಿ ಸಿನಿಮಾ ಯಶಸ್ವಿಯಾಗಿದೆ’ ಎಂದು ‘ದಿ ಕೇರಳ ಸ್ಟೋರಿ’ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದರು. ಮಧ್ಯಪ್ರದೇಶ ಸರ್ಕಾರ, ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಿದೆ. ತೆರಿಗೆ ವಿನಾಯಿತಿ ಬಗ್ಗೆ ಉತ್ತರ ಪ್ರದೇಶ ಸರ್ಕಾರ ರ್ಚಚಿಸುತ್ತಿದೆ. ಜತೆಗೆ ಹಲವು ಕಲಾವಿದರು ಚಿತ್ರಕ್ಕೆ ಬೆಂಬಲ ನೀಡಿದ್ದಾರೆ. ಭಾರತೀಯ ಟಿವಿ ಮತ್ತು ಸಿನಿಮಾ ನಿರ್ದೇಶಕರ ಸಂಘ ಸಹ ಪಶ್ಚಿಮ ಬಂಗಾಳ ಸರ್ಕಾರದ ಕ್ರಮವನ್ನು ವಿರೋಧಿಸಿದೆ. ಸಂಸದ ತೇಜಸ್ವಿ ಸೂರ್ಯ ಹಾಗೂ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಭಾನುವಾರ (ಮೇ 7) ಕಾಲೇಜು ವಿದ್ಯಾರ್ಥಿನಿಯರಿಗೆ ಚಿತ್ರದ ವಿಶೇಷ ಪ್ರದರ್ಶನ ಆಯೋಜಿಸಿದ್ದರು.

    ದಿನದಿಂದ ದಿನಕ್ಕೆ ಏರುತ್ತಿದೆ ಗಳಿಕೆ

    ಸಿನಿಮಾ ರಿಲೀಸ್​ಗೂ ಮುನ್ನ ಕೆಲವರು ಬಾಯ್ಕಾಟ್ ಕರೆ ನೀಡಿದರೆ, ಕೆಲವರು ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಯಾವುದಕ್ಕೂ ಜಗ್ಗದೆ ಕಳೆದ ಶುಕ್ರವಾರ (ಮೇ 5) ಚಿತ್ರ ರಿಲೀಸ್ ಆಗಿದ್ದು, ಮೂರು ದಿನಗಳಲ್ಲಿ 35 ಕೋಟಿ ರೂ.ಗೂ ಅಧಿಕ ಗಳಿಕೆ ಮಾಡಿಕೊಂಡಿದೆ. ಮೊದಲ ದಿನ 8 ಕೋಟಿ ರೂ., 2ನೇ ದಿನ 11 ಕೋಟಿ ರೂ.. ಹಾಗೂ ಮೂರನೇ ದಿನ 16 ಕೋಟಿ ರೂ. ಕಲೆಕ್ಷನ್ ಮಾಡಿಕೊಂಡಿರುವ ಚಿತ್ರ 50 ಕೋಟಿ ರೂ. ಗಳಿಕೆಯತ್ತ ಮುನ್ನುಗ್ಗಿದೆ.

    ಎಲೆಕ್ಟ್ರಿಕ್ ದ್ವಿಚಕ್ರವಾಹನಗಳ ಬೆಲೆಯಲ್ಲಿ ಭಾರಿ ಇಳಿಕೆ; ಕಾರಣ ಇದು..

    ನಾನು ಬದುಕಿದ್ದಾಗಲೇ ಸಾಯೋದಕ್ಕೆ ಇಷ್ಟಪಡ್ತೀನಿ!: ನಿರ್ದೇಶಕ ಉಪೇಂದ್ರ ಹೀಗಂದಿದ್ಯಾಕೆ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts