More

    ನಿಮ್ಮ ಮುಂದಿನ ಜನಾಂಗ ಕೊಲ್ಲೂರು ದೇವಸ್ಥಾನಕ್ಕೆ ಬರಬೇಕೆಂದರೆ ‘ದಿ ಕೇರಳ ಸ್ಟೋರಿ’ ಸಿನಿಮಾ ನೋಡಿ!

    ಉಡುಪಿ: ದೇಶದಾದ್ಯಂತ ‘ದಿ ಕೇರಳ ಸ್ಟೋರಿ’ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಲವ್ ಜಿಹಾದ್ ಕುರಿತಂತೆ ಮೂಡಿ ಬಂದ ಈ ಸಿನಿಮಾದ ಬಿಡುಗಡೆಗೆ ಪಶ್ಚಿಮ ಬಂಗಾಳದಲ್ಲಿ ನಿಷೇಧ ಹೇರಿರುವ ಘಟನೆಯೂ ನಡೆದಿದೆ. ಅಲ್ಲದೆ ಉತ್ತರ ಪ್ರದೇಶದಲ್ಲಿ ತೆರಿಗೆ ವಿನಾಯಿತಿ ನೀಡಿರುವ ಬೆಳವಣಿಗೆಯೂ ನಡೆದಿದೆ. ಸಾಕಷ್ಟು ಟೀಕೆ, ಆರೋಪಗಳ ನಡುವೆ ಈ ಸಿನಿಮಾ ಮಾತ್ರ ಗಲ್ಲಾ ಪೆಟ್ಟಿಗೆಯಲ್ಲಿ ಕಮಾಲ್ ಮಾಡುತ್ತಿದೆ.

    ಇದನ್ನೂ ಓದಿ: ವಿದ್ಯಾರ್ಥಿನಿ ಅಪಹರಣ! ತನಿಖೆ ನಡೆಸಿದ ಪೊಲೀಸರಿಗೆ ಕಾದಿತ್ತು ಶಾಕ್

    ಹಿಂದುಪರ ಸಂಘಟನೆಗಳು ಸೇರಿದಂತೆ ಅನೇಕರು ಒಂದು ಬಾರಿ ‘ದಿ ಕೇರಳ ಸ್ಟೋರಿ’ ಸಿನಿಮಾ ನೋಡಿ. ಮತಾಂತರ ಪಿಡುಗಿನ ಬಗ್ಗೆ ಅರಿತುಕೊಳ್ಳಿ ಎಂಬ ಸಂದೇಶ ರವಾನಿಸಿದ್ದಾರೆ. ಇದೀಗ ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾದ ಬಗ್ಗೆ ಪ್ರಚಾರ ಮಾಡಲಾಗುತ್ತಿದೆ!

    ‘ದಿ ಕೇರಳ ಸ್ಟೋರಿ’ ಸಿನಿಮಾ ನೋಡಿ!

    ಕೊಲ್ಲೂರು ಕ್ಷೇತ್ರಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ಕೇರಳ ರಾಜ್ಯದಿಂದ ಭಕ್ತರು ಮೂಕಾಂಬಿಕಾ ದೇವಿಯ ದರ್ಶನಕ್ಕೆ ಆಗಮಿಸುತ್ತಾರೆ. ಹೀಗಾಗಿ ದೇವಾಲಯದ ದ್ವಾರ ಹಾಗೂ ಆವರಣ ಭಾಗದಲ್ಲಿ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಸಿನಿಮಾದ ಕುರಿತಾದ ಬ್ಯಾನರ್ ಅಳವಡಿಸಿದ್ದಾರೆ. ‘ಮಲಯಾಳಿ ಭಕ್ತರಿಗೆ ಸ್ವಾಗತ, ನಿಮ್ಮ ಮುಂದಿನ ಜನಾಂಗ ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಬರಬೇಕೆಂದರೆ ದಿ ಕೇರಳ ಸ್ಟೋರಿ ನೋಡಿ’ ಎಂದು ಬ್ಯಾನರ್​ನಲ್ಲಿ ಬರೆಯಲಾಗಿದೆ.

    ಇದನ್ನೂ ಓದಿ: ಚುನಾವಣಾ ಸೋಲಿನಿಂದ ಕಂಗೆಟ್ಟ ನಿಖಿಲ್ ಕುಮಾರಸ್ವಾಮಿ! ಸಾಂತ್ವನ ಹೇಳಿದ ಡಿಕೆಶಿ

    ಸದ್ಯ ಆಂಗ್ಲ ಭಾಷೆಯಲ್ಲಿ ಅಳವಡಿಸಿರುವ ಈ ಬ್ಯಾನರ್ ಕೊಲ್ಲೂರು ದೇವಸ್ಥಾನಕ್ಕೆ ಬರುವ ಭಕ್ತರ ಗಮನ ಸೆಳೆಯುತ್ತಿದೆ. ವಿನೋದ್ ಕೊಲ್ಲೂರು, ವಿಜಯ ಬಳಗಾರ್, ಸಂತೋಷ್ ಭಟ್, ಪ್ರಕಾಶ್ ಹಳ್ಳಿ ಬೇರು, ಹರೀಶ್ ಶೆಟ್ಟಿ ನೇತೃತ್ವದಲ್ಲಿ ಈ ಬ್ಯಾನರ್ ಅಳವಡಿಕೆ ಮಾಡಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts