25.7 C
Bangalore
Sunday, December 15, 2019

ಹೊಸಪೇಟೆಯಲ್ಲಿ ‘ದ್ವಾರಕಾ’: ಬಿಜೆಪಿ ಅಭ್ಯರ್ಥಿ ಆನಂದ ಸಿಂಗ್ ರಾಜ ವೈಭೋಗ

Latest News

ಗಾಂಧೀಜಿಯವರ ವಿಚಾರಧಾರೆ ದಾರಿದೀಪವಾಗಲಿ

ವಿಜಯಪುರ: ಗಾಂಧೀಜಿ ಅವರ ವಿಚಾರಧಾರೆಗಳು ನಮ್ಮ ಬದುಕಿಗೆ ದಾರಿ ದೀಪವಾಗಲಿ ಎಂದು ಧಾರವಾಡದ ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಡಾ.ಸಂಜೀವ ಕುಲಕರ್ಣಿ ಹೇಳಿದರು.ನಗರದ...

ಬಿಎಸ್‌ವೈ ವೈಟ್‌ಡ್ರೆಸ್ ರಮೇಶ ಬ್ಲ್ಯಾಕ್ ಮಾಡ್ತಾನೆ

ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಧರಿಸುವ ವೈಟ್ ಡ್ರೆಸ್‌ಅನ್ನು ಬ್ಲಾೃಕ್ ಮಾಡುತ್ತಾನೆ ಎಂದು ಶಾಸಕ ಸತೀಶ ಜಾರಕಿಹೊಳಿ...

ನಗ ನಗದುಗಳೊಂದಿಗೆ ಮಾವನ ಮನೆಯಿಂದ ರಾತ್ರೋರಾತ್ರಿ ಪರಾರಿಯಾದ ಮದುಮಗಳು; ಮದುಮಗ ಕಂಗಾಲು!

ಬದೌನ್​ (ಉತ್ತರಪ್ರದೇಶ): ಹೊಸದಾಗಿ ಮದುವೆಯಾಗಿದ್ದ ಮದುಮಗಳು ಗಂಡನ ಮನೆಯವರಿಗೆ ಆಹಾರದಲ್ಲಿ ಮತ್ತು ಬರುವ ಔಷಧ ಬೆರಸಿ ಮನೆಯಲ್ಲಿದ್ದ ನಗ ನಾಣ್ಯ ದೋಚಿ ಪರಾರಿಯಾಗಿದ್ದಾಳೆ. ಬದೌನ್​ ಜಿಲ್ಲೆಯ ಚೋಟಾ...

ಪೌರತ್ವ ತಿದ್ದುಪಡಿ ಕಾಯ್ದೆ ಶೇ.1000 ಪಟ್ಟು ಸರಿ: ಪ್ರತಿಭಟನೆಗಳಿಗೆ ಕಾಂಗ್ರೆಸ್​​ ಮಿತ್ರಪಕ್ಷಗಳು ಕಾರಣ

ನವದೆಹಲಿ: ಪೌರತ್ವ ತಿದ್ದುಪಡಿ ಕಾನೂನಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕಾಂಗ್ರೆಸ್​ ಮತ್ತು ಅದರ ಮಿತ್ರ ಪಕ್ಷಗಳೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ...

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

ಹೊಸಪೇಟೆ (ಬಳ್ಳಾರಿ): ನಗರದ ಬೈಪಾಸ್​ನಿಂದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ವೈಟ್ ಹೌಸ್​ನಂತೆ ಕಾಣುವ ವೈಭೋವಪೇತ ಅರಮನೆ ಎಂಥವರ ದೃಷ್ಟಿಯನ್ನೂ ಸೆಳೆಯುತ್ತದೆ. ಈ ಭವ್ಯ ಬಂಗಲೆ ಗಣಿ ಉದ್ಯಮಿ, ಮಾಜಿ ಸಚಿವ, ವಿಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆನಂದ ಸಿಂಗ್ ಅವರದ್ದು ಎಂಬುದು ವಿಶೇಷ.

ಪತ್ನಿ ಲಕ್ಷ್ಮಿಸಿಂಗ್ ಹೆಸರಿನಲ್ಲಿರುವ ಒಟ್ಟು 2.09 ಲಕ್ಷ ಚದರ ಅಡಿ ಪೈಕಿ 57,899 ಚದರ ಅಡಿ ಸ್ಥಳದಲ್ಲಿ ಭವ್ಯ ಬಂಗಲೆ ‘ದ್ವಾರಕಾ’ ನಿರ್ವಿುಸಲಾಗಿದೆ. ಆನಂದ್​ಸಿಂಗ್ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ದಾಖಲೆ ಪ್ರಕಾರ, 2018ರ ಏಪ್ರಿಲ್​ನಲ್ಲಿ ನಿರ್ಮಾಣ ಹಂತದಲ್ಲಿದ್ದ ಈ ಬಂಗಲೆಯ ಮೌಲ್ಯ ಅಂದಾಜು 30 ಕೋಟಿ ರೂ. ಇದೀಗ ಬಂಗಲೆ ಮೌಲ್ಯ ಇನ್ನೂ ಹೆಚ್ಚಾಗಿರಬಹುದು ಎಂದು ಅಂದಾಜಿಸಲಾಗಿದೆ.

ಬಂಗಲೆ ಹೊರಗಿನಷ್ಟೇ ಒಳಗೂ ಅಂದವಾಗಿದೆ. ಐಷಾರಾಮಿ, ಇಂಪೋರ್ಟೆಡ್ ವಸ್ತುಗಳಿಂದ ಅಲಂಕೃತವಾಗಿದೆ. ಪೀಠೋಪಕರಣಗಳು ನೋಡುಗರನ್ನು ಬೆರಗುಗೊಳಿಸುತ್ತವೆ. ಅರಮನೆ ಈಜುಕೊಳವನ್ನೂ ಹೊಂದಿದೆ. ಮಹಡಿಗಳಿಗೆ ತೆರಳಲು ಲಿಫ್ಟ್ ಅಳವಡಿಸಲಾಗಿದೆ. ಮೊದಲ ಮಹಡಿಯಲ್ಲಿ ಕುಟುಂಬ ಸದಸ್ಯರಿಗೆ ಬೃಹತ್ ಕೋಣೆಗಳನ್ನು ನಿರ್ವಿುಸಲಾಗಿದೆ. ಅಂತಾರಾಷ್ಟ್ರೀಯ ಮಟ್ಟದ ಸಿನಿಮಾ ಥಿಯೇಟರ್ ಕೂಡ ಇದೆ. ಬಂಗಲೆಯ ಆವರಣದಲ್ಲಿ ಆನಂದ್​ಸಿಂಗ್ ಕಚೇರಿ ಇದೆ. ಬಂಗಲೆ ಸುತ್ತ ವಿಶಾಲವಾದ ಅಂಗಳದಲ್ಲಿ ಸಸ್ಯಕಾಶಿ ಕಣ್ಮನ ಸೆಳೆಯುತ್ತದೆ. ಮನೆ ಸುತ್ತ ನಾಲ್ಕು ರಸ್ತೆಗಳಿದ್ದು, ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ರಸ್ತೆಗೆ ಹೊಂದಿಕೊಂಡಂತೆ ಪಾರ್ಕ್​ಗಳನ್ನು ನಿರ್ವಿುಸಲಾಗಿದೆ.

ಖಾಸಗಿಯಾಗಿ ಗೃಹಪ್ರವೇಶ: ಭವ್ಯ ಬಂಗಲೆಯ ಗೃಹಪ್ರವೇಶ ಕಾರ್ಯಕ್ರಮ ಶುಕ್ರವಾರ ಖಾಸಗಿಯಾಗಿ ನೆರವೇರಿತು. ಕಳೆದೆರಡು ದಿನಗಳಿಂದ 108 ಪುರೋಹಿತರು ವಿಶೇಷ ಪೂಜೆ, ಗೃಹ ಶಾಂತಿ, ಹೋಮ ನಡೆಸಿದರು. ಬಂಗಲೆಯಲ್ಲಿ ಆನಂದ್​ಸಿಂಗ್ ದಂಪತಿ ನಗರದ ಕೊಟ್ಟೂರು ಸಂಸ್ಥಾನ ಮಠದ ಜಗದ್ಗುರು ಡಾ.ಸಂಗನಬಸವ ಸ್ವಾಮೀಜಿ ಪಾದಪೂಜೆ ನೆರವೇರಿಸಿದರು. ಸಂಸದರು, ಶಾಸಕರು, ಮಾಜಿ ಶಾಸಕರು ಹಾಗೂ ಸಿಂಗ್ ಪರಮಾಪ್ತರಿಗೆ ಮಾತ್ರ ಬಂಗಲೆ ಪ್ರವೇಶಕ್ಕೆ ಅವಕಾಶ ಕಲ್ಲಿಸಲಾಗಿತ್ತು.

ಅರಮನೆಯ ಪೂರ್ವ ಮತ್ತು ಉತ್ತರ ದಿಕ್ಕಿನಲ್ಲಿರುವ ದ್ವಾರಗಳಲ್ಲಿ ಕಾವಲುಗಾರರನ್ನು ನಿಯೋಜನೆ ಮಾಡಲಾಗಿತ್ತು. ಪೂರ್ವ ದ್ವಾರದಲ್ಲಿ ಪೂಜೆ ನೆರವೇರಿಸಿದರೆ, ಉತ್ತರ ದ್ವಾರದಲ್ಲಿ ಗಣ್ಯರಿಗೆ ಪ್ರವೇಶಾವಕಾಶ ಕಲ್ಪಿಸಲಾಯಿತು. ಬಂಗಲೆಯ ದ್ವಾರದಲ್ಲಿ ಭದ್ರತಾ ಸಿಬ್ಬಂದಿ ವಾಕಿಟಾಕಿಯಲ್ಲಿ ಅತಿಥಿಗಳ ಕುರಿತು ಮಾಹಿತಿ ಖಚಿತಪಡಿಸಿಕೊಂಡು ಒಳಬಿಡುತ್ತಿದ್ದ ದೃಶ್ಯ ಕಂಡುಬಂತು. ಚುನಾವಣಾ ಸಿಬ್ಬಂದಿಯೂ ಬಂಗಲೆ ಸುತ್ತಮುತ್ತ ನಿಗಾ ವಹಿಸಿ ಅತಿಥಿಗಳ ಆಗಮನದ ವಿಡಿಯೋ ಚಿತ್ರೀಕರಣ ಮಾಡಿದರು. ನೀತಿ ಸಂಹಿತೆ ಹಿನ್ನೆಲೆಯಲ್ಲಿ ಬೇರೆ ಯಾರನ್ನೂ ಗೃಹಪ್ರವೇಶಕ್ಕೆ ಆಹ್ವಾನಿಸಿಲ್ಲ ಎಂದು ಆನಂದ್​ಸಿಂಗ್ ಆಪ್ತರು ತಿಳಿಸಿದ್ದಾರೆ.

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...