ಕಾನೂನು ಕಾಲೇಜು ವಿರುದ್ಧ ತನಿಖೆಗೆ ಆಗ್ರಹ

ಮೈಸೂರು: ನಿಯಮಾವಳಿ ಉಲ್ಲಂಘಿಸಿ ವಿದೇಶಿ ವಿದ್ಯಾರ್ಥಿಗಳಿಗೆ ಕಾನೂನು ಪದವಿ ನೀಡಿರುವ ಆರೋಪ ಎದುರಿಸುತ್ತಿರುವ ಶಾರದಾ ವಿಲಾಸ ಕಾನೂನು ಕಾಲೇಜು ವಿರುದ್ಧ ತನಿಖೆ ನಡೆಸಬೇಕೆಂದು ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪಿ.ಶೋಭಾ ಎಂಬ ವಿದ್ಯಾರ್ಥಿನಿ ಒಮನ್ ದೇಶದಲ್ಲಿ ನರ್ಸ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಈ ಕಾಲೇಜಿಗೆ ಹಾಜರಾಗಿಲ್ಲ. ಆದರೂ, ಸುಪ್ರೀಂಕೋರ್ಟ್ ಆದೇಶ, ಬಾರ್ ಕೌನ್ಸಿಲ್‌ನ ನಿಯಮ ಉಲ್ಲಂಘಿಸಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿದೆ. ಇದನ್ನು ಪ್ರಶ್ನಿಸಿದ್ದ 123 ವಿದ್ಯಾರ್ಥಿಗಳ ವಿರುದ್ಧ ಸುಳ್ಳು ದಾಖಲೆ ಸೃಷ್ಟಿಸಿ ಅವರ ವಿದ್ಯಾಭ್ಯಾಸವನ್ನು ಹಾಳು ಮಾಡಲಾಗಿದೆ ಎಂದು ಆರೋಪಿಸಿದರು.

ಕರ್ನಾಟಕ ರಾಜ್ಯ ಕಾನೂನು ವಿವಿಗೆ ಈ ಕುರಿತು ದೂರು ನೀಡಿದರೂ ಪ್ರಯೋಜನವಾಗಿಲ್ಲ. ವಿದ್ಯಾರ್ಥಿನಿ ಪಿ.ಶೋಭಾ ಸೇರಿ ಅಕ್ರಮವಾಗಿ ಕಾನೂನು ಪದವಿ ಪಡೆದಿರುವ ಈ ಕಾಲೇಜಿನ ವಿದ್ಯಾರ್ಥಿಗಳ ಕುರಿತು ತನಿಖೆಯಾಗಬೇಕು. ಅನ್ಯಾಯಕ್ಕೆ ಒಳಗಾದ 123 ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿ ಡಿಸಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಎಬಿವಿಪಿ ಮುಖಂಡ ಗೌತಮ್ ಸೇರಿ ಹಲವರು ಇದ್ದರು.

Leave a Reply

Your email address will not be published. Required fields are marked *