More

    ಸೋರುತ್ತಿದ್ದ ದೇಗುಲಕ್ಕೆ ದುರಸ್ತಿ ಭಾಗ್ಯ

    ಸಾಗರ: ಇತಿಹಾಸ ಪ್ರಸಿದ್ಧ ಶ್ರೀ ಮಹಾಗಣಪತಿ ದೇವಾಲಯ ಸೋರುತ್ತಿದ್ದು ಮೇಲ್ಛಾವಣಿಯನ್ನು ಟಾರ್ಪಾಲ್‌ನಿಂದ ಮುಚ್ಚಲಾಗಿತ್ತು. ಈ ಬಗ್ಗೆ ‘ವಿಜಯವಾಣಿ’ಯಲ್ಲ್ಲಿ ಸುದ್ದಿ ಪ್ರಕಟವಾಗುತ್ತಿದ್ದಂತೆಯೇ ಬುಧವಾರ ಶಿವಮೊಗ್ಗ ನಿರ್ಮಿತಿ ಕೇಂದ್ರದ ಅಧಿಕಾರಿಗಳು ದೇವಾಲಯಕ್ಕೆ ಆಗಮಿಸಿ ತುರ್ತು ಕಾಮಗಾರಿ ಆರಂಭಿಸಿದ್ದಾರೆ.
    ಶಾಸಕ ಗೋಪಾಲಕೃಷ್ಣ ಬೇಳೂರು ಪ್ರತಿಕ್ರಿಯಿಸಿ, ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಮೊದಲು ನಿರ್ಮಿತಿ ಕೇಂದ್ರದವರಿಗೆ ತುರ್ತು ಕಾಮಗಾರಿ ನಡೆಸಲು ಸೂಚಿಸಿದ್ದೇನೆ. ಜನತೆ ಆತಂಕಪಡುವ ಪ್ರಶ್ನೆಯೇ ಇಲ್ಲ. ದೇವಾಲಯದ ಸಮಗ್ರ ಅಭಿವೃದ್ಧಿಗೆ ನಾವು ಕಟಿಬದ್ಧರಾಗಿದ್ದೇವೆ ಎಂದರು. ಸಾಗರದ ಇತಿಹಾಸ ಪ್ರಸಿದ್ದವಾದ ಗಣಪತಿಕೆರೆ ಒತ್ತುವರಿಗೆ ಸಂಬಂಧಿಸಿದಂತೆಯೂ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತದೆ. ದೇವಾಲಯದ ಮುಂಭಾಗದಲ್ಲಿ 70 ಲಕ್ಷ ರೂ. ವೆಚ್ಚದಲ್ಲಿ ಸುಂದರ ಉದ್ಯಾನ, ಥೀಮ್ ಪಾರ್ಕ್ ನಿರ್ಮಾಣ ಮಾಡಲಾಗುವುದು. ಸಾರ್ವಜನಿಕರು ಕೂಡ ಈ ಕುರಿತಂತೆ ಕೆಲವು ಸಲಹೆಗಳನ್ನು ನೀಡಿದ್ದು ಅದನ್ನು ಇಲಾಖೆಯ ಜತೆಯಲ್ಲಿ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. ದೇವಾಲಯಕ್ಕೆ ಬರುವ ಭಕ್ತರಿಗೆ ಯಾವುದೇ ಸಮಸ್ಯೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಮುಜರಾಯಿ ಇಲಾಖೆಗೆ ತಾಕೀತು ಮಾಡಿದ್ದೇನೆ ಎಂದಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts