More

    ಮಾನವತಾವಾದಿಯ ಬದುಕು ತೆರೆದಿಟ್ಟ ಪುಸ್ತಕ

    ಮದ್ದೂರು: ಹನ್ನೆರಡನೇ ಶತಮಾನದಲ್ಲಿ ಹೊಸ ಸಮಾಜವನ್ನು ಆಧ್ಯಾತ್ಮಿಕ ಮತ್ತು ವೈಚಾರಿಕ ತಳಹದಿ ಮೇಲೆ ಕಟ್ಟುವ ನಿಟ್ಟಿನಲ್ಲಿ ತೊಡಗಿಸಿಕೊಂಡ ಯುಗಪುರುಷ ಬಸವಣ್ಣ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಚ್.ಕಾಳೀರಯ್ಯ ಬಣ್ಣಿಸಿದರು.

    ಪಟ್ಟಣದ ತಾಲೂಕು ಕಚೇರಿಯಲ್ಲಿ ತಾಲೂಕು ರಾಷ್ಟ್ರಿಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಭಕ್ತಿ ಭಂಡಾರಿ ಬಸವಣ್ಣ ಜಯಂತಿಯಲ್ಲಿ ಮಾತನಾಡಿ, ಅರಿವಿನ ಮೊದಲ ಮೆಟ್ಟಿಲೇ ಆತ್ಮವಿಮರ್ಶೆ. ಅರಿವನ್ನೇ ಗುರುವಾಗಿಸಿಕೊಂಡಿದ್ದವರು ಬಸವಣ್ಣ. ಅವರ ಬದುಕು ತೆರೆದಿಟ್ಟ ಪುಸ್ತಕ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

    ಇದೇ ವೇಳೆ ಬಸವಣ್ಣನ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡಿದರು. ಗ್ರೇಡ್-2 ತಹಸೀಲ್ದಾರ್ ಸೋಮಶೇಖರ್, ಮುಖಂಡರಾದ ವೀರಭದ್ರಸ್ವಾಮಿ, ಬಿ.ವಿ.ಮಂಜುನಾಥ್, ತ್ರಿವೇಣಿ, ಮಹೇಶ್, ಕುಮಾರ್, ಅರ್ಚಕರಾದ ಗೌರಿಶಂಕರ್, ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಜಿಲ್ಲಾಧ್ಯಕ್ಷ ವಿ.ಸಿ.ಉಮಾಶಂಕರ್ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

    .

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts