ವಿಜಯವಾಣಿ ಸುದ್ದಿಜಾಲ ಧಾರವಾಡ
ಜಕಣಾಚಾರಿ ಅವರು ತಮ್ಮ ಜೀವನವನ್ನು ಕಲೆಗಾಗಿ ಮುಡಿಪಾಗಿಟ್ಟಿದ್ದರು. ತಮ್ಮ ವೃತ್ತಿ ಜೀವನದಲ್ಲಿ ನಾಡಿನ ಹಲವು ದೇವಾಲಯ ನಿರ್ಮಿಸಿದ್ದಾರೆ. ಅವರ ಬದುಕು ಭವ್ಯ ಕಲಾಪರಂಪರೆಯ ಪ್ರತೀಕವಾಗಿದೆ ಎಂದು ಮೇಯರ್ ರಾಮಪ್ಪ ಬಡಿಗೇರ ಹೇಳಿದರು.
ನಗರದ ಆಲೂರು ವೆಂಕಟರಾವ್ ಭವನದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಆಯೋಜಿಸಿದ್ದ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಅಮರಶಿಲ್ಪಿ ಜಕಣಾಚಾರಿ ನಮ್ಮ ಸಮಾಜಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಭಾರತೀಯ ಇತಿಹಾಸದಲ್ಲಿ ಕಲೆಗೆ ತನ್ನದೇ ಆದ ಮಹತ್ವ ಇದೆ. ಆ ದಿಸೆಯಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಅವರು ಬೇಲೂರು, ಹಳೆಬೀಡು, ಸೋಮನಾಥಪುರ ಮತ್ತಿತರ ಕಡೆಗಳಲ್ಲಿ ಕೆತ್ತಿರುವ ಕೆತ್ತನೆಗಳೇ ಅವರ ಅಮರ ಕಲೆಗೆ ಸಾಕ್ಷಿಯಾಗಿದೆ ಎಂದರು.
ಅಧ್ಯತೆ ವಹಿಸಿದ್ದ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಮಾತನಾಡಿ, ನಮ್ಮ ನಾಡಿನಲ್ಲಿರುವ ಕಸೂತಿ, ಬಟ್ಟೆ ನೇಯುವುದು, ಕುಂಬಾರಿಕೆ, ಬುಟ್ಟಿ ನೇಯುವುದು, ಹಾಸಿಗೆ ನೇಯುವುದು, ಇತರ ಕಲೆಗಳು ನಶಿಸುತ್ತಿವೆ. ಇವುಗಳ ರಕ್ಷಣೆ ಮತ್ತು ಮುಂದುವರಿಕೆಗೆ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ ಎಂದರು.
ಡಾ. ವಿರೂಪಾಕ್ಷ ಬಡಿಗೇರ ವಿಶೇಷ ಉಪನ್ಯಾಸ ನೀಡಿದರು. ಸಾಧಕರಾದ ರವೀಂದ್ರಾಚಾರ್ಯ ಮತ್ತು ಕೃಷ್ಣಾ ಹಿತ್ತಾಳೆ ಅವರಿಗೆ ಸನ್ಮಾನಿಸಲಾಯಿತು.
ಶ್ರೀ ಮೌನೇಶ್ವರ ಧರ್ಮನಿಧಿ ಸಂಸ್ಥೆ ಅಧ್ಯಕ್ಷ ಮಹಾರುದ್ರ ಬಡಿಗೇರ, ವಿಶ್ವಕರ್ಮ ಜಿಲ್ಲಾ ಮಹಾಸಭಾ ಅಧ್ಯಕ್ಷ ಕಾಳಪ್ಪ ಬಡಿಗೇರ, ಜನಜಾಗೃತಿ ಸಮಿತಿ ಅಧ್ಯಕ್ಷ ವಸಂತ ಅರ್ಕಾಚಾರ, ವಿಶ್ವಕರ್ಮ ಮಹಾಒಕ್ಕೂಟ ಅಧ್ಯಕ್ಷ ನಿರಂಜನ ಬಡಿಗೇರ, ವಿಠ್ಠಲ ಕಮ್ಮಾರ, ಸಂತೋಷ ಬಡಿಗೇರ, ಇತರರು ಇದ್ದರು.
ಕುಮಾರ ಬೆಕ್ಕೇರಿ ಸ್ವಾಗತಿಸಿದರು. ಆರತಿ ದೇವಶಿಕಾಮಣಿ ನಿರೂಪಿಸಿದರು. ಮಹಾರುದ್ರ ಬಡಿಗೇರ ವಂದಿಸಿದರು.
ಅಮರ ಶಿಲ್ಪಿಯ ಬದುಕು ಕಲಾಪರಂಪರೆಯ ಪ್ರತೀಕ

You Might Also Like
ಹೋಟೆಲ್ ಸ್ಟೈಲ್ ಪನೀರ್ ಅಮೃತಸರಿ ಮಾಡುವ ವಿಧಾನ ಇಲ್ಲಿದೆ; ನೀವೊಮ್ಮೆ ಟ್ರೈ ಮಾಡಿ | Recipe
ಹಲವು ಬಾರಿ ಒಂದೇ ರೀತಿಯ ಆಹಾರ ತಿಂದು ಬೇಸರವಾಗುತ್ತದೆ. ಆಗ ಹೋಟೆಲ್‌ಗೆ ಹೋಗಿ ಊಟ ಮಾಡಲು…
ಚಿನ್ನದ ಮೇಲೆ ಲೋನ್ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳಿಂದ ಮೊದಲು ದೂರವಿರಿ, ಇಲ್ಲದಿದ್ರೆ ನಷ್ಟ ಖಚಿತ | Gold Loan
Gold Loan: ಮನೆಯಲ್ಲಿದ್ದರೆ ಚಿನ್ನ ಚಿಂತೆಯೂ ಏತಕೇ ಇನ್ನಾ? ಎಂಬ ಮಾತನ್ನು ಇಂದಿಗೂ ನಮ್ಮ ಜನ…
ತಣ್ಣೀರಿನಲ್ಲಿ ಈಜುವುದರಿಂದಾಗುವ ಪ್ರಯೋಜನಗಳನ್ನು ನೀವು ತಿಳಿದುಕೊಳ್ಳಲೇಬೇಕು; ನಿಮಗಾಗಿಯೇ ಈ ಮಾಹಿತಿ | Health Tips
ತಣ್ಣೀರಿನಲ್ಲಿ ಈಜುವುದು ಕೇವಲ ಸಾಹಸ ಕ್ರೀಡೆ ಅಥವಾ ಹವ್ಯಾಸವಲ್ಲ. ಆದರೆ ಇದು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು…