More

    ಮಹನೀಯರ ಜೀವನ ಮೌಲ್ಯಗಳು ಅನುಕರಣೀಯ

    ಆಲೂರು: ಗಾಂಧೀಜಿ ಹಾಗೂ ಲಾಲ್ ಬಹಾದೂರ್ ಶಾಸ್ತ್ರಿ ಅವರ ಜೀವನ ಮೌಲ್ಯಗಳು ಮುಂದಿನ ಪೀಳಿಗೆಗೆ ಅನುಕರಣೀಯ ಎಂದು ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎ.ಟಿ. ಮಲ್ಲೇಶ್ ತಿಳಿಸಿದರು.

    ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಸೋಮವಾರ ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹಾದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಹನೀಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿ, ಗಾಂಧೀಜಿ ಅವರ ಸಂದೇಶಗಳು ಸಾರ್ವಕಾಲಿಕ. ಇಡೀ ಜಗತ್ತಿಗೆ ಎಂದೆಂದಿಗೂ ಪ್ರಸ್ತುತ ಎಂದು ತಿಳಿಸಿದರು.

    ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣೇಗೌಡ ಮಾತನಾಡಿ, ಅಹಿಂಸಾ ಚಳವಳಿ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಗಾಂಧೀಜಿ ಇಡೀ ಜಗತ್ತಿಗೆ ಶಾಂತಿಯ ಸಂದೇಶವನ್ನು ಸಾರಿದ್ದಾರೆ. ಸತ್ಯಮಾರ್ಗದ ರಕ್ತರಹಿತ ಚಳವಳಿಯ ಶಕ್ತಿ ಏನೆಂಬುದನ್ನು ಅವರು ಪರಿಚಯಿಸಿದ್ದಾರೆ. ಲಾಲ್ ಬಹಾದೂರ್ ಶಾಸ್ತ್ರಿ ಅವರು ಅತ್ಯಂತ ಸರಳ ಜೀವನ ನಡೆಸಿ ಸಮಾಜದ ಸುಧಾರಣೆಗೆ ಬದುಕನ್ನೇ ಮುಡಿಪಾಗಿಟ್ಟಿದ್ದರು ಎಂದರು.

    ಉಪತಹಸೀಲ್ದಾರ್ ಅಶೋಕ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸ್ಟೀಫನ್ ಪ್ರಕಾಶ್, ವೃತ್ತ ಶಿಕ್ಷಣಾಧಿಕಾರಿ ಎಂ.ಬಿ. ವಿಜಯಕಾಂತ್, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಗುಲಾಂ ಸತ್ತಾರ್, ದಲಿತ ಮುಖಂಡ ಅಜ್ಜೇನಹಳ್ಳಿ ರಂಗಯ್ಯ, ಚರ್ಚ್ ಫಾದರ್ ಬಸವರಾಜ್ ಹಾಗೂ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts