

ಬೆಂಗಳೂರು: ಮೇ 10 ರಂದು ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದೆ. ಈಗಾಗಲೇ ಅಭ್ಯರ್ಥಿಗಳು ರ‍್ಯಾಲಿ, ಕಾರ್ಯಕ್ರಮ ಹಾಗೂ ಸಭೆಗಳನ್ನು ಮಾಡಲುವ ಮೂಲಕವಾಗಿ ಮತ ಭೇಟೆ ಪ್ರಾರಂಭಿಸಿದ್ದಾರೆ. ಎದುರಾಳಿಗಳು ಮತ್ತು ವಿರೋಧ ಪಕ್ಷದ ಅಭ್ಯರ್ಥಿಗಳು ಒಬ್ಬರ ಮೇಲೊಬ್ಬರು ಕೆಸರು ಎರಚಾಟ ಮಾಡಿಕೊಳ್ಳುತ್ತಿದ್ದಾರೆ. ಭ್ರಷ್ಟ ಲಿಂಗಾಯತ ಸಿಎಂ ಎಂದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವಾಗಿ ಆಕ್ರೋಶ ವ್ಯಕ್ತವಾಗಿದೆ.
ಭ್ರಷ್ಟ ಲಿಂಗಾಯತ ಸಿಎಂ ಎಂದಿದ್ದಕ್ಕೆ ಲಿಂಗಾಯತ ಸಮುದಾಯ ಆಕ್ರೋಶ ಸಿದ್ದರಾಮಯ್ಯ ಬಗ್ಗೆ ಮಾನ ನಷ್ಟ ಮೊಕದ್ದಮೆ ಹೂಡುವುದಾಗಿ ಟ್ರಸ್ಟ್ ನಿಂದ ಎಚ್ಚರಿಕೆ ನೀಡಿದೆ.
ಭ್ರಷ್ಟ ಲಿಂಗಾಯತ ಸಿಎಂ ಎಂದಿದ್ದಕ್ಕೆ ಲಿಂಗಾಯತ ಸಮುದಾಯ ಆಕ್ರೋಶ ವ್ಯಕ್ತಪಡಿಸಿದೆ. ಶ್ರೀಸರ್ಪಭೂಷಣ ಶಿವಯೋಗಿಗಳ ಮಠದ ಟ್ರಸ್ಟ್ ನಿಂದ ಮಾಧ್ಯಮ ಪ್ರಕಟಣೆಯಲ್ಲಿ, ಸಿದ್ದರಾಮಯ್ಯ ಲಿಂಗಾಯತರ ಬಗ್ಗೆ ಮೊದಲಿನಿಂದಲೂ ಗೌರವಯುತವಾಗಿ ನಡೆದುಕೊಂಡಿಲ್ಲ. ಈಗ ಬೊಮ್ಮಾಯಿ ಅವರನ್ನು ಲಿಂಗಾಯಿತರು ಎಂಬ ನೆಲೆಯಲ್ಲಿ ಭ್ರಷ್ಟರು ಎಂದು ಆರೋಪಿಸಿದ್ದಾರೆ. ಕರ್ನಾಟಕದ ಬಹುಸಂಖ್ಯಾತ ಲಿಂಗಾಯತ ಸಮುದಾಯಕ್ಕೆ ಅಪಮಾನವಾಗಿದೆ ಎಂದು ಹೇಳಿದೆ.
ಸಿದ್ದರಾಮಯ್ಯ ವಿರುದ್ಧ ನಾಡಿನಾದ್ಯಂತ ಲಿಂಗಾಯತ ಸಮುದಾಯ ಪ್ರತಿಭಟನೆ ಹಮ್ಮಿಕೊಳ್ಳುತ್ತದೆ. ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ ಬಗ್ಗೆ ಮಾನ ನಷ್ಟ ಮೊಕದ್ದಮೆ ಹೂಡುವುದಾಗಿ ಟ್ರಸ್ಟ್ ಎಚ್ಚರಿಕೆ ನೀಡಿದೆ.