More

    ವಿದ್ಯುತ್ ಬಿಲ್ ವಸೂಲಿಗೆ ಬಂದ ಲೈನ್​ಮ್ಯಾನ್​ಗೆ ಚಪ್ಪಲಿಯಿಂದ ಹಲ್ಲೆ; ವ್ಯಕ್ತಿ ಅರೆಸ್ಟ್

    ಕೊಪ್ಪಳ: ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್​​ ಸರ್ಕಾರ ವಿದ್ಯುತ್​ ಬಿಲ್​ ಕಟ್ಟುವ ಭರವಸೆ ನೀಡಿದೆ. ಇಂದೀಗ ವಿದ್ಯುತ್​ ಬಿಲ್​ ವಿಚಾರದಲ್ಲಿ ಲೈನ್​ಮ್ಯಾನ್​ ಮತ್ತು ಜನಸಾಮಾನ್ಯರ ನಡುವೆ ಅಸಮಧಾನ ವ್ಯಕ್ತವಾಗುತ್ತಿದೆ.

    ಅಧಿಕಾರಕ್ಕೆ ಬಂದರೆ 200 ಯೂನಿಟ್​ ಉಚಿತ ಎಂದು ಕಾಂಗ್ರೆಸ್​ ಹೇಳಿತ್ತು. ಇದೀಗ ಕಾಂಗ್ರೆಸ್​ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಕೆಲ ಜನರು ವಿದ್ಯುತ್​ ಬಿಲ್​ ಕಟ್ಟುವುದಿಲ್ಲ ಎಂದು ಲೈನ್​ಮ್ಯಾನ್​ಗಳ ಜತೆ ಜಗಳಕ್ಕೆ ಇಳಿದಿದ್ದಾರೆ.

    ಕೊಪ್ಪಳದ ಕುಕನಪಲ್ಲಿ ಗ್ರಾಮದಲ್ಲಿ ವಿದ್ಯುತ್​ ಬಿಲ್​ ವಸೂಲಿಗೆ ಬಂದ ಲೈನ್​ಮ್ಯಾನ್​ಗೆ ವ್ಯಕ್ತಿಯೊಬ್ಬ ಅವಾಚ್ಯ ಶಬ್ದದಿಂದ ನಿಂದಿಸಿದ್ದಲ್ಲದೆ, ಚಪ್ಪಲಿಯಿಂದ ಹೊಡೆದು ಹಲ್ಲೆ ಮಾಡಿದ್ದಾನೆ. ಲೈನ್​ಮ್ಯಾನ್ ಮೇಲೆ ಹಲ್ಲೆ ಮಾಡಿದ್ದ ವ್ಯಕ್ತಿಯನ್ನು ಕೊಪ್ಪಳ ಜಿಲ್ಲೆ ಮುನಿರಾಬಾದ್ ಪೊಲೀಸರು ಬಂಧಿಸಿದ್ದಾರೆ.Electricity Bill

    ಕೊಪ್ಪಳದಲ್ಲಿ ಎಸ್​ಪಿ ಯಶೋಧಾ ವಂಟಗೋಡಿ ಮಾತನಾಡಿ, “ಲೈನ್​ಮ್ಯಾನ್ ಮಂಜುನಾಥ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿದ ವ್ಯಕ್ತಿ ಚಂದ್ರಶೇಖರಯ್ಯ. ಈತ ಕಳೆದ ಆರು ತಿಂಗಳಿಂದ ಬಿಲ್ ಬಾಕಿ ಉಳಿಸಿಕೊಂಡಿದ್ದನು. ಅಂದಾಜು 9990 ರೂ. ಬಿಲ್ ಬಾಕಿ ಉಳಿಸಿಕೊಂಡಿದ್ದನು”ಎಂದಿದ್ದಾರೆ.

    “ವಿದ್ಯತ್​​​​​ ಬಿಲ್​​ ಕಟ್ಟದ ಹಿನ್ನೆಲೆಯಲ್ಲಿ ಜೆಸ್ಕಾಂ ಸಿಬ್ಬಂದಿ ಚಂದ್ರಶೇಖರಯ್ಯ ಮನೆಯ ಕರೆಂಟ್​​ ಲೈನ್ ಕಟ್ ಮಾಡಿದ್ದರು. ಆದರೂ ಮತ್ತೆ ಅನಧಿಕೃತ ವಿದ್ಯುತ್ ಸಂರ್ಪಕ ಪಡೆದಿದ್ದ ಚಂದ್ರಶೇಖರಯ್ಯ. ಅಕ್ರಮ ವಿದ್ಯತ್​​ಸಂರ್ಪಕ ಪಡೆದಿದ್ದನ್ನೇ ಪ್ರಶ್ನಿಸೋಕೆ ಬಂದಿದ್ದ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾನೆ. ಹಲ್ಲೆ ನಡೆಸಿದ ಚಂದ್ರಶೇಖರಯ್ಯ ವಿರುದ್ಧ ಮಂಜುನಾಥ್​ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹೀಗಾಗಿ ಚಂದ್ರಶೇಖರಯ್ಯ ಅವರನ್ನ ಅರೆಸ್ಟ್ ಮಾಡಿದ್ದೇವೆ. ಮುಂದೆ ಕಾನೂನು ಕ್ರಮ‌ ಕೈಗೊಳ್ಳುತ್ತೇವೆಂದು” ತಿಳಿಸಿದ್ದಾರೆ.

    ಕೊಪ್ಪಳದಲ್ಲಿ ವಿದ್ಯುತ್ ಬಿಲ್ ವಸೂಲಿಗೆ ಹೋದ ಲೈನ್​ಮ್ಯಾನ್​ಗೆ ಚಪ್ಪಲಿಯಿಂದ ಹಲ್ಲೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts