

ಉತ್ತರಕನ್ನಡ: ಪ್ರವಾಸಕ್ಕೆಂದು ಬೆಂಗಳೂರಿನಿಂದ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣಕ್ಕೆ ತೆರಳಿದ್ದ ವ್ಯಕ್ತಿ ಈಜಲು ಹೋಗಿ ಮೃತಪಟ್ಟಿದ್ದಾರೆ.
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ರಿಷಬ್ ಸಿಂಗ್ (36) ಮೃತ ವ್ಯಕ್ತಿ. ಗೋಕರ್ಣದ ಕುಡ್ಲೆ ಬೀಚ್ನಲ್ಲಿ ಘಟನೆ ನಡೆದಿದೆ. ಇವರು ವಿದೇಶಿ ಮಹಿಳೆಯೊಂದಿಗೆ ಗೋಕರ್ಣಕ್ಕೆ ಪ್ರವಾಸಕ್ಕೆ ಬಂದಿದ್ದರು. ಸಮುದ್ರಕ್ಕೆ ಈಜಲು ಹೋಗಿದ್ದಾಗ ಅವಘಡ ಸಂಭವಿಸಿದೆ. ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್)