ದೈವಜ್ಞ ಯುವಕ ಸಂಘದಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ

Dhaivagna
Published on

ಬೆಂಗಳೂರು : ಬೆಂಗಳೂರು ದೈವಜ್ಞ ಯುವಕ ಸಂಘವು ಬಸವನಗುಡಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಸಾಮೂಹಿಕ ಶ್ರೀಸತ್ಯನಾರಾಯಣ ಸ್ವಾಮಿ ಪೂಜಾ ಕಾರ್ಯಕ್ರಮವು ಅದ್ಧೂರಿಯಾಗಿ ನಡೆಯಿತು.

ಕಳೆದ 30 ವರ್ಷಗಳಿಂದ ದೈವಜ್ಞ ಯುವಕ ಸಂಘವು ಪ್ರತಿವರ್ಷ ಬೆಂಗಳೂರಿನಲ್ಲಿ ಶ್ರೀಸತ್ಯನಾರಾಯಣ ಸ್ವಾಮಿ ಸಾಮೂಹಿಕ ವ್ರತವನ್ನು ಆಯೋಜಿಸಿಕೊಂಡು ಬಂದಿದ್ದು, 31ನೇ ವರ್ಷದ ಕಾರ್ಯಕ್ರಮವು ಭಾನುವಾರ ನಡೆಯಿತು. ಸತ್ಯನಾರಾಯಣ ಸ್ವಾಮಿ ಪೂಜೆಯ ನಂತರ ದಿವ್ಯ ಸಾನ್ನಿಧ್ಯ ವಹಿಸಿದ್ದ ದೈವಜ್ಞ ಬ್ರಾಹ್ಮಣ ಸಮಾಜದ ಜ್ಞಾನೇಶ್ವರಿ ಪೀಠಾಧಿಪತಿ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಮಹಸ್ವಾಮಿಗಳ ಪಾದಪೂಜೆ ನೆರವೇರಿಸಿ ಗುರುವಂದನೆ ಸಮರ್ಪಿಸಲಾಯಿತು. ನಂತರ ಮಹಾಮಂಗಳಾರತಿಯೊಂದಿಗೆ ಸರ್ವರಿಗೂ ಪ್ರಸಾದ ವಿನಿಯೋಗ ಮಾಡಲಾಯಿತು.

ನಂತರ ನಡೆದ ಸಮಾರಂಭದಲ್ಲಿ ದಾನಿಗಳ ಸಹಕಾರದಲ್ಲಿ ಸಮಾಜದ ಅರ್ಹರಿಗೆ ಹೊಲಿಗೆ ಯಂತ್ರ ವಿತರಣೆ, ಆರ್ಥಿಕವಾಗಿ ದುರ್ಬಲವಾಗಿರುವ ವಿದ್ಯಾರ್ಥಿಗಳಿಗೆ ವಿಧ್ಯಾನಿಧಿ ವಿತರಣೆ ಮಾಡಲಾಯಿತು. ಸಮಾಜದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ದೈವಜ್ಞ ಸಿರಿ ಪುರಸ್ಕಾರ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದ ನಂತರ ಬೆಂಗಳೂರಿನ ಎಲ್ಲ ಕಡೆಗಳಿಂದ ಆಗಮಿಸಿದ್ದ ದೈವಜ್ಞ ಸಮಾಜದ ಬಂಧುಗಳಿಗೆ ಮಹಾಪ್ರಸಾದ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ದೈವಜ್ಞ ಬ್ರಾಹ್ಮಣ ಸಮಾಜದ ಅಧ್ಯಕ್ಷ ಮೋಹನ್ ಎಸ್.ಶೇಟ್, ದೈವಜ್ಞ ಬ್ರಾಹ್ಮಣ ಸಖಿ ಸಂಘದ ಅಧ್ಯಕ್ಷೆ ಪುಷ್ಪಾ ವರ್ಣೇಕರ್, ಬೆಂಗಳೂರು ದೈವಜ್ಞ ಯುವಕ ಸಂಘದ ಅಧ್ಯಕ್ಷ ಮಹೇಶ್ ಜಿ.ಶೇಟ್, ಉದ್ಯಮಿಗಳಾದ ಶ್ರೀಕಾಂತ ಎಸ್.ಶೇಟ್ ಮತ್ತಿತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net