More

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ

    ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿದ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.

    ಬಂಗಾಳಕೊಲ್ಲಿಯಲ್ಲಿ ಉಂಟಾಗುವ ವಾಯುಭಾರ ಕುಸಿತದಿಂದ ದಕ್ಷಿಣ ಒಳನಾಡಿನಲ್ಲಿ ಸಾಧರಣ ಮಳೆ ನಿರೀಕ್ಷಿಸಲಾಗಿದೆ. ದಕ್ಷಿಣ ಒಳನಾಡಿನ ಹಲವು ಭಾಗಗಳಾದ ಬೆಂಗಳೂರು, ಮಂಡ್ಯ, ಮೈಸೂರು, ಕೋಲಾರ, ರಾಮನಗರದಲ್ಲಿ ಮಳೆಯ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

    ಇಂದು ಮತ್ತು ನಾಳೆ (ಡಿ.25&26) ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದ್ದು, ಡಿ.27&28 ರಂದು ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಯಲ್ಲಿ ಹಗುರ ಮಳಯಾಗುವ ಸಾಧ್ಯತೆ ಇದೆ. ಪ್ರಸ್ತುತ ರಾಜಧಾನಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts