More

    ಹೊಂಬುಜದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ

    ರಿಪ್ಪನ್​ಪೇಟೆ: ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಅವರ ಆಶಯದಂತೆ ಹೊಂಬುಜದಲ್ಲಿ ಶೀಘ್ರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ವಿುಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

    ಹೊಂಬುಜ ಜೈನಮಠದ ಪದ್ಮಾವತಿ ಎಜುಕೇಷನಲ್ ಟ್ರಸ್ಟ್​ನಿಂದ ನಿರ್ವಣಗೊಂಡ ಪರಂಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ನೂತನ ಕಟ್ಟಡವನ್ನು ಸೋಮವಾರ ಲೋಕಾರ್ಪಣೆಗೊಳಿಸಿ ಮಾತನಾಡಿ, ಹೊಂಬುಜ ಕ್ಷೇತ್ರ ಅನಾದಿ ಕಾಲದಿಂದಲೂ ಧಾರ್ವಿುಕ ವಿಚಾರದ ಜತೆಗೆ ಜನರ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತ ಬಂದಿದೆ ಎಂದರು.

    ಶತಮಾನಗಳ ಇತಿಹಾಸ ಹೊಂದಿರುವ ಪುಣ್ಯಕ್ಷೇತ್ರ ತನ್ನ ಸೇವಾ ಚಟುವಟಿಕೆಗಳಿಂದ ದೇಶ-ವಿದೇಶಗಳಲ್ಲಿ ಪ್ರಖ್ಯಾತಿ ಪಡೆದಿದೆ. ಜನಸಾಮಾನ್ಯರಲ್ಲಿ ಇಂಗ್ಲಿಷ್ ಶಿಕ್ಷಣ ಕಲಿಸುವ ಉದ್ದೇಶದಿಂದ ಆಂಗ್ಲಮಾಧ್ಯಮ ಶಾಲೆ ಆರಂಭಿಸಿದೆ. ಇದರಿಂದ ಕನ್ನಡದ ಜತೆಗೆ ಇತರ ಭಾಷೆಗಳಲ್ಲಿಯೂ ನೈಪುಣ್ಯತೆ ಪಡೆಯಲು ಸಹಕಾರಿ ಎಂದು ಅಭಿಪ್ರಾಯಪಟ್ಟರು.

    ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, ಶ್ರೀಗಳು ಜಾತಿ, ಮತ, ಪಂಥವನ್ನು ಮೀರಿದ ಧಾರ್ವಿುಕ, ಶೈಕ್ಷಣಿಕ, ಸಾಮಾಜಿಕ ಸೇವೆ ಸಲ್ಲಿಸುತ್ತಿದ್ದಾರೆ. ಗುರುಕುಲ ಶಿಕ್ಷಣದಿಂದ ಆರಂಭವಾದ ಕಲಿಕೆ ಇಂದು ಉಚ್ಛ್ರಾಯ ಸ್ಥಿತಿಯಲ್ಲಿದೆ. ಇದರಲ್ಲಿಯೂ ಆಮೂಲಾಗ್ರ ಬದಲಾವಣೆಯಾಗಬೇಕು. ಜನರಿಗೆ ಇಂದು ನೈತಿಕ, ಧಾರ್ವಿುಕ ಬದುಕಿನ ಮೌಲ್ಯಗಳನ್ನು ತಿಳಿಸುವ ಶಿಕ್ಷಣದ ಅಗತ್ಯವಿದೆ ಎಂದು ಪ್ರತಿಪಾದಿಸಿದರು.

    ತಾಪಂ ಅಧ್ಯಕ್ಷ ವೀರೇಶ ಆಲುವಳ್ಳಿ, ಜಿಪಂ ಸದಸ್ಯರಾದ ಕಲಗೋಡು ರತ್ನಾಕರ್, ಶ್ವೇತಾ ಬಂಡಿ, ಬಿಇಒ ರಮೇಶ್, ಸಿಆರ್​ಪಿ ದೀಪಾ ಪ್ರಕಾಶ್ ಇದ್ದರು. ಮಂಜಪ್ಪ ಸ್ವಾಗತಿಸಿದರು. ಶ್ರೀಧರ ಕಡಸೂರು ವಂದಿಸಿದರು.

    ಶಿಕ್ಷಣವೆಂಬುದು ಜ್ಞಾನ, ಜೀವನ ಮೌಲ್ಯಗಳ ಜೀವಾಂಶ ಸಾಧನವಿದ್ದಂತೆ. ಗ್ರಾಮೀಣ ವಿದ್ಯಾರ್ಥಿಗಳು ಪಟ್ಟಣದ ವಿದ್ಯಾರ್ಥಿಗಳಿಗೆ ಸ್ಪರ್ಧೆಯೊಡ್ಡಬೇಕೆಂಬ ಉದ್ದೇಶದಿಂದ ಮಠ ಆಂಗ್ಲಮಾಧ್ಯಮ ಶಿಕ್ಷಣ ಆರಂಭಿಸಿದೆ. ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳು ಈ ಶಾಲೆಯಲ್ಲಿ ಶಿಕ್ಷಣ ಪಡೆದು ಜಾಗತಿಕ ಮಟ್ಟದಲ್ಲಿ ಗುರುತಿಸುವಂತಾಗಬೇಕು.

    | ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts