ಆರು ತಿಂಗಳಲ್ಲಿ 400 ಜನರಿಂದ ಅತ್ಯಾಚಾರ; ಪೊಲೀಸರೂ ಭಾಗಿ!

rape
Published on

ಮಹಾರಾಷ್ಟ್ರ: ಇದು ಅತ್ಯಂತ ಅಮಾನವೀಯ ಪ್ರಕರಣವೆಂದರೂ ಸರಿಯೇ. ಏಕೆಂದರೆ ಆರೇ ತಿಂಗಳಲ್ಲಿ ಬಾಲಕಿಯೊಬ್ಬಳ ಮೇಲೆ 400 ಮಂದಿ ಅತ್ಯಾಚಾರ ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾತ್ರವಲ್ಲ, ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಅಪ್ರಾಪ್ತ ವಯಸ್ಸಿನವಳ ಮೇಲಿನ ಅತ್ಯಾಚಾರಕ್ಕೆ ಸಂಬಂಧಿಸಿ ಮಹಾರಾಷ್ಟ್ರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಈ ಸಂಬಂಧ ಸಂತ್ರಸ್ತೆಯೇ ದೂರು ನೀಡಿದ್ದು, ಸದ್ಯ ಆಕೆ ಎರಡು ತಿಂಗಳ ಗರ್ಭಿಣಿ ಎಂಬುದು ತಿಳಿದುಬಂದಿದೆ. ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಎಸ್​ಪಿ ಬೀಡ್​ ರಾಜ ರಾಮಸ್ವಾಮಿ ತಿಳಿಸಿದ್ದಾರೆ.

ಈ ಬಾಲಕಿ ಮೇಲೆ ಆರು ತಿಂಗಳಲ್ಲಿ 400 ಮಂದಿ ಅತ್ಯಾಚಾರ ಮಾಡಿದ್ದಾರೆ ಎನ್ನಲಾಗಿದೆ. ಪೊಲೀಸರು ಕೂಡ ಬಾಲಕಿಯನ್ನು ಲೈಂಗಿಕವಾಗಿ ಶೋಷಣೆ ಮಾಡಿದ್ದಾರೆ ಎಂದೂ ಹೇಳಲಾಗುತ್ತಿದೆ ಎಂಬುದಾಗಿ ಎಸ್​ಪಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net