More

    ಸವಣೂರು, ರಾಣೆಬೆನ್ನೂರಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ !

    ಸವಣೂರ: ಈ ವರ್ಷ ಸವಣೂರು ಹಾಗೂ ರಾಣೆಬೆನ್ನೂರು ತಾಲೂಕುಗಳಲ್ಲಿ ಭ್ರಷ್ಟಾಚಾರ, ಕಳಪೆ ಕಾಮಗಾರಿ ಸಂಬಂಧಿಸಿದಂತೆ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಬೆಂಗಳೂರು ನಂತರದಲ್ಲಿ ಹೆಚ್ಚು ಪ್ರಕರಣಗಳು ಹಾವೇರಿ ಜಿಲ್ಲೆಯಲ್ಲಿ ದಾಖಲಾಗಿವೆ ಎಂದು ಲೋಕಾಯುಕ್ತ ಡಿವೈಎಸ್ಪಿ ಡಾ. ಬಿ.ಪಿ. ಚಂದ್ರಶೇಖರ ತಿಳಿಸಿದರು.

    ಪಟ್ಟಣದ ಕಂದಾಯ ಇಲಾಖೆಯ ಉಪ ವಿಭಾಗಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಘಟಕ ಹಾವೇರಿ ವತಿಯಿಂದ ಬುಧವಾರ ಏರ್ಪಡಿಸಿದ್ದ ಸಾರ್ವಜನಿಕ ಕುಂದು- ಕೊರತೆ ಮತ್ತು ಜನಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಲೋಕಾಯುಕ್ತರು ಯಾವುದೇ ದೂರನ್ನು ಪರಿಶೀಲಿಸದೇ ಏಕಾಏಕಿ ಪ್ರಕರಣ ದಾಖಲಿಸುವುದಿಲ್ಲ. ಜನಸಾಮಾನ್ಯರಿಂದ ದಾಖಲಾದ ದೂರುಗಳನ್ನು ಮೂರು ಹಂತದ ಅಧಿಕಾರಿಗಳು ಪರಿಶೀಲನೆ ಕೈಗೊಂಡ ನಂತರವೇ ಪ್ರಕರಣ ದಾಖಲಿಸಿಕೊಂಡು ಸಂಬಂಧಿಸಿದ ಆರೋಪಿಗಳನ್ನು ವಶಪಡಿಸಿಕೊಂಡು, ದೂರುದಾರರಿಗೆ ನ್ಯಾಯ ಒದಗಿಸಲಾಗುವುದು. ಆದ್ದರಿಂದಲೇ ದೇಶದಲ್ಲಿ ಅನ್ಯ ರಾಜ್ಯಗಳಿಗಿಂತ ಕರ್ನಾಟಕ ಲೋಕಾಯುಕ್ತ ಉನ್ನತ ಸ್ಥಾನ ಪಡೆದಿದೆ ಎಂದು ಹೇಳಿದರು.

    ಸವಣೂರ ತಾಲೂಕಿನಿಂದ ಹಲವಾರು ದೂರುಗಳು ಮೇಲಿಂದ ಮೇಲೆ ಬರುತ್ತಿವೆ. ಸವಣೂರಿನ ಪುರಸಭೆಯಿಂದಾಗಿ ರಾಜ್ಯಮಟ್ಟದಲ್ಲಿಯೇ ಸುದ್ದಿಯಾಗಿದೆ. ರೈತನೊಬ್ಬ ತನ್ನ ಎತ್ತುಗಳನ್ನು ಪುರಸಭೆಗೆ ತಂದಿದ್ದ ಎಂದರೆ ಆತ ಎಷ್ಟು ನೊಂದಿರಬಹದು. ಎಷ್ಟು ತೊಂದರೆ ಉಂಟಾಗಿದೆ ಎಂಬುದನ್ನು ನಾವೆಲ್ಲರೂ ಆಲೋಚಿಸಬೇಕಿದೆ. ಆ ಪ್ರಕರಣ ಬೆಳಕಿಗೆ ಬಂದ ನಂತರ ಪುರಸಭೆ ಎಚ್ಚೆತ್ತುಕೊಂಡು ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವುದಾಗಿ ಧ್ವನಿವರ್ಧಕದ ಮೂಲಕ ತಿಳಿಸುತ್ತಿರುವುದು ತಿಳಿದು ಬಂದಿದೆ ಎಂದರು.

    ತಾಲೂಕಿನ 21 ಗ್ರಾಮ ಪಂಚಾಯಿತಿಗಳಲ್ಲಿ ಲೋಕಾಯುಕ್ತದ ನಾಮಫಲಕ ಕಡ್ಡಾಯವಾಗಿ ಅಳವಡಿಸಬೇಕು. ಎಲ್ಲ ಗ್ರಾ.ಪಂಗಳಲ್ಲಿನ ಸಿಬ್ಬಂದಿ ಹಾಗೂ ಪಿಡಿಒಗಳು ಕಡ್ಡಾಯವಾಗಿ ಗುರುತಿನ ಚೀಟಿ ಹೊಂದಿರಬೇಕು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್​ಗಳಲ್ಲಿನ ವಿದ್ಯಾರ್ಥಿಗಳು ಸಲ್ಲಿಸಿದ ಹಲವಾರು ದೂರುಗಳನ್ನು ಆದರಿಸಿ ಡಿವೈಎಸ್​ಪಿ ಡಾ. ಬಿ.ಪಿ. ಚಂದ್ರಶೇಖರ, ಸಹಾಯಕ ನಿರ್ದೇಶಕಿ ಸುಲೋಚನಾ ಕಟ್ನೂರ ಅವರನ್ನು ತರಾಟೆಗೆ ತೆಗೆದುಕೊಂಡರು.

    ಸವಣೂರ ಪುರಸಭೆ ಜಿಲ್ಲೆಯಲ್ಲಿಯೇ ಅತ್ಯಂತ ಭ್ರಷ್ಟ ಅಧಿಕಾರಿಗಳನ್ನು ಹೊಂದಿದೆ ಎಂಬ ಆರೋಪ ಪ್ರತಿಧ್ವನಿಸಿತು. ತಹಸೀಲ್ದಾರ್ ಅನಿಲಕುಮಾರ ಜಿ., ತಾಪಂ ಇಒ ನವೀನ ಪ್ರಸಾದ ಕಟ್ಟಿಮನಿ ಮಾತನಾಡಿದರು. ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಇತರರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts