More

    ವಿರೋಧದ ನಡೆವೆಯೂ ಬಹುಗ್ರಾಮ ಕುಡಿವ ನೀರಿನ ಯೋಜನೆಗೆ ಬಿಗಿ ಪೊಲಿಸ್ ಬಂದೋಬಸ್ತಿನಲ್ಲಿ ಶಂಕು

    ತೀರ್ಥಹಳ್ಳಿ: ಜಲಜೀವನ್ ಮಿಷನ್ ಯೋಜನೆಯಡಿ ತಾಲೂಕಿಗೆ ಮಂಜೂರಾಗಿರುವ 344 ಕೋಟಿ ರೂ. ವೆಚ್ಚದ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿಗೆ ಗ್ರಾಮಸ್ಥರ ವಿರೋಧದ ನಡುವೆಯೂ ಸೋಮವಾರ ಉಪವಿಭಾಗಾಧಿಕಾರಿ ಜಿ.ಎಚ್.ಸತ್ಯನಾರಾಯಣ ನೇತೃತ್ವದಲ್ಲಿ ಬಿಗಿ ಪೊಲಿಸ್ ಬಂದೋಬಸ್ತಿನಲ್ಲಿ ಚಾಲನೆ ನೀಡಲಾಗಿದೆ.

    ಕೋಡ್ಲು ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಮಹಿಳೆಯರೂ ಸೇರಿದಂತೆ ನೂರಾರು ಗ್ರಾಮಸ್ಥರು ಸ್ಥಳದಲ್ಲಿ ಜಮಾವಣೆಗೊಂಡಿದ್ದರು. ಸರ್ಕಾರ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದರಲ್ಲದೇ, ಪೊಲೀಸ್ ಬಲದಿಂದ ನಡೆಯುವ ಆಡಳಿತ ಎಷ್ಟು ದಿನ ನಡೆಯುತ್ತೆ ಎನ್ನುವುದನ್ನು ನೋಡುತ್ತೇವೆ. ಮುಂಬರುವ ಲೋಕಸಭಾ ಚುನಾವಣೆಗೆ ಬಹಿಷ್ಕಾರ ಹಾಕುತ್ತೇವೆ ಗ್ರಾಮಸ್ಥರು ಎಚ್ಚರಿಕೆ ನೀಡಿದರು.
    ಆರಂಭದಿಂದಲೂ ವಿರೋಧ:
    ಈ ಯೋಜನೆಗೆ ಆರಂಭದಿಂದಲೂ ಗ್ರಾಮಸ್ಥರ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಡಿವೈಎಸ್‌ಪಿ ಗಜಾನನ ಸುತಾರ್ ನೇತೃತ್ವದಲ್ಲಿ ಸುಮಾರು 200ಕ್ಕೂ ಹೆಚ್ಚು ಪೊಲೀಸರ ಕಟ್ಟುನಿಟ್ಟಿನ ಬಂದೋಬಸ್ತ್ ಮಾಡಲಾಗಿತ್ತು. ಯೋಜನೆಯ ಟ್ರೀಟ್ಮೆಂಟ್ ಪ್ಲಾಂಟ್‌ಗಾಗಿ ಕೋಡ್ಲು ಗ್ರಾಮದ ಸ.ನಂ.142ರಲ್ಲಿ ಮಂಜೂರಾಗಿರುವ ಈ ಪ್ರದೇಶಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿತ್ತು. ಈ ಸ್ಥಳಕ್ಕೆ ಪ್ರವೇಶವನ್ನು ನಿರ್ಬಂಧಿಸಿ ಆಲಗೇರಿ, ರಾಮಕೃಷ್ಣಪುರ ಮತ್ತು ತೂಗು ಸೇತುವೆ ಮಾರ್ಗದಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿ ನಿಯಂತ್ರಣ ಮಾಡಲಾಗಿತ್ತು.
    ಹೆಗ್ಗೋಡು ಗ್ರಾಪಂ ಸದಸ್ಯೆ ಇಂದಿರಮ್ಮ ಮಾತನಾಡಿ, ಪ್ರತಿ ಗ್ರಾಪಂ ಮಟ್ಟದಲ್ಲಿ ಇರುವ ಸಂಪನ್ಮೂಲವನ್ನು ಬಳಸಿ ಕುಡಿಯುವ ನೀರಿನ ಯೋಜನೆಯನ್ನು ಮಾಡುವುದು ಸೂಕ್ತ. ಗ್ರಾಮಸ್ಥರ ಅಭಿಪ್ರಾಯವನ್ನು ಧಿಕ್ಕರಿಸಿ ಇಲ್ಲಿಂದಲೇ ನೀರನ್ನು ಸರಬರಾಜು ಮಾಡಬೇಕೆಂಬ ಹಠ ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
    ತಾಪಂ ಮಾಜಿ ಸದಸ್ಯ ಬಾಳೇಹಳ್ಳಿ ಪ್ರಭಾಕರ್, ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸಿರಿಬೈಲು ಧರ್ಮೇಶ್, ತಲುಬಿ ರಾಘವೇಂದ್ರ, ಯೋಜನೆಯ ಗುತ್ತಿಗೆದಾರ ಡಿ.ಎಸ್.ಅಬ್ದುಲ್ ರಹಮಾನ್ ಇತರರಿದ್ದರು.

    ಹಿಡನ್ ಅಜೆಂಡಾ ಬಯಲು
    ಈ ವೇಳೆ ಸುದ್ದಿಗಾರರ ಜತೆ ಮಾತನಾಡಿದ ರೈತ ಮುಖಂಡ ಕೊಡ್ಲು ವೆಂಕಟೇಶ್, ಕುಡಿಯುವ ನೀರಿನ ಯೋಜನೆಗೆ ನಮ್ಮ ವಿರೋಧ ಇಲ್ಲ ಎಂಬುದನ್ನು ಲಾಗಾಯ್ತಿನಿಂದ ಹೇಳಿದ್ದೇವೆ. ಈ ಯೋಜನೆ ಅವೈಜ್ಞಾನಿಕವಾಗಿದ್ದು ಯೋಜನೆಗೆ ಗುರುತಿಸಿರುವ ಜಾಗ ಸೂಕ್ತವಾಗಿಲ್ಲ. ವರಾಹಿ ನದಿಯಿಂದ ನೀರನ್ನು ಎತ್ತುವುದಾದರೆ ಇಲ್ಲಿ ಟ್ರೀಟ್ಮೆಂಟ್ ಪ್ಲಾಂಟ್ ಮಾಡುವ ಉದ್ದೇಶವಾದರೂ ಏನು ಎಂಬುದು ತಿಳಿಯುತ್ತಿಲ್ಲ. ಮಾಲತಿ ನದಿ ದಡದಲ್ಲಿ ಸರ್ವೆ ಮಾಡುತ್ತಿದ್ದು, ಇದರ ಹಿಂದಿನ ಹಿಡನ್ ಅಜೆಂಡಾ ಬಯಲಾಗಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts