More

    ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ

    ಹುಬ್ಬಳ್ಳಿ: ಯುವಕನೊಬ್ಬನನ್ನು ಭೀಕರವಾಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಮಂಗಳವಾರ ತಡರಾತ್ರಿ ನಗರದ ಗೋಕುಲ ರಸ್ತೆಯ ಸಿಲ್ವರ್ ಟೌನ್‌ನಲ್ಲಿ ನಡೆದಿದೆ.
    ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ತಾಲೂಕಿನ ಮರಡಗಿ ಗ್ರಾಮದ ನಿವಾಸಿ ಮೌಲಾಲಿ ಮುಲ್ಲಾ (24) ಕೊಲೆಯಾದ ಯುವಕ.
    ಈತ ಗಾರೆ ಕೆಲಸಕ್ಕೆಂದು ಹುಬ್ಬಳ್ಳಿಗೆ ಬಂದಿದ್ದ ಎನ್ನಲಾಗಿದ್ದು, ನಿರ್ಮಾಣ ಹಂತದಲ್ಲಿರುವ ಮನೆಯೊಂದರಲ್ಲಿ ದುಷ್ಕರ್ಮಿಗಳು ಈತನನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಗೋಕುಲ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts