ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆ 26,815ಕ್ಕೆ ಏರಿಕೆ; 24 ಗಂಟೆಯಲ್ಲಿ 571 ಮಂದಿ ಡಿಸ್​​ಚಾರ್ಜ್​

covid vaccine
Published on

ಬೆಂಗಳೂರು: ರಾಜ್ಯದಲ್ಲಿ ಕರೊನಾ ವೈರಸ್​ ಸಮುದಾಯ ಪ್ರಸರಣಕ್ಕೆ ತಲುಪಿದೆ ಎಂಬುದು ಸ್ಪಷ್ಟವಾಗುತ್ತಿದೆ. ಪ್ರತಿ ದಿನವೂ ಸಾವಿರಕ್ಕೂ ಹೆಚ್ಚು ಪ್ರಕರಣ ಪತ್ತೆಯಾಗುತ್ತಿದೆ.

ಕಳೆದ 24 ಗಂಟೆಯಲ್ಲಿ 1498 ಕರೊನಾ ಪ್ರಕರಣಗಳು ಪತ್ತೆಯಾಗಿವೆ. ಒಂದೇ ದಿನ 15 ಜನರು ಸಾವನ್ನಪ್ಪಿದ್ದಾರೆ. ಒಟ್ಟು 571 ಮಂದಿ ಆಸ್ಪತ್ರೆಯಿಂದ ಡಿಸ್​​ಚಾರ್ಜ್​ ಆಗಿದ್ದಾರೆ.

ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 26,815 ಕ್ಕೆ ಏರಿದೆ. ಮೃತರ ಸಂಖ್ಯೆ 416 ರಷ್ಟಾಗಿದೆ. ಡಿಸ್​ಚಾರ್ಜ್​ ಆದವರ ಸಂಖ್ಯೆ 11,098ಕ್ಕೆ ಏರಿದ್ದು, ಸಕ್ರಿಯ ಕರೊನಾ ಪ್ರಕರಣಗಳು 15,297 ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇಂದೂ ಕೂಡ ಬೆಂಗಳೂರಿನಲ್ಲೇ ಹೆಚ್ಚು ಜನರಲ್ಲಿ ಸೋಂಕು ದೃಢಪಟ್ಟಿದೆ. ಇಂದು ಯಾವ ಜಿಲ್ಲೆಗಳಲ್ಲಿ ಎಷ್ಟು ಕೇಸ್​? ಇಲ್ಲಿದೆ ಪಟ್ಟಿ:

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net