ಮತದಾನ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೃದ್ಧೆ ಸಾವು

ಹಾವೇರಿ: ಜಿಲ್ಲೆಯ ಹಿರೇಕೆರೂಕು ತಾಲೂಕಿನ ಹಂಸಭಾವಿಯಲ್ಲಿ ಮತದಾನ ಮಾಡಿ ಮನೆಗೆ ವಾಪಸ್ಸಾಗುತ್ತಿದ್ದ ವೃದ್ಧೆ ಮೃತಪಟ್ಟಿದ್ದಾರೆ. 91 ವರ್ಷದ ನಿಂಗಮ್ಮ ಸಣ್ಣಕ್ಕಿ ಮೃತ ದುರ್ದೈವಿ.

ಇಂದು ಮಧ್ಯಾಹ್ನ 12 ಗಂಟೆಗೆ ಮತ ಚಲಾಯಿಸಲು ಕುಟುಂಬದ ಸದಸ್ಯರೊಂದಿಗೆ ಮತಗಟ್ಟೆಗೆ ಬಂದಿದ್ದರು. ಮತ ಹಾಕಿ ಕುಟುಂಬದ ಸದಸ್ಯರೊಂದಿಗೆ ಬೈಕ್​​ನಲ್ಲಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಆಯತಪ್ಪಿ ಕೆಳೆಗೆ ಬಿದ್ದಿದ್ದಾರೆ. ಆದರೆ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ. (ದಿಗ್ವಿಜಯ ನ್ಯೂಸ್​)