More

    ಗ್ರಾಮ ಸ್ವರಾಜ್ ಪರಿಕಲ್ಪನೆಯ ಹರಿಕಾರ

    ಪಿರಿಯಾಪಟ್ಟಣ: ಅಹಿಂಸಾ ಮಾರ್ಗದಿಂದ ಸ್ವಾತಂತ್ರೃ ದೊರಕಿಸಿ ಕೊಟ್ಟ ಮಹಾತ್ಮರ ಜಯಂತಿಯನ್ನು ಆಚರಿಸುತ್ತಿರುವುದು ನಮ್ಮೆಲ್ಲರ ಸೌಭಾಗ್ಯ ಎಂದು ತಹಸೀಲ್ದಾರ್ ಕುಂಇ ಅಹಮದ್ ತಿಳಿಸಿದರು.

    ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಮಹಾತ್ಮ ಗಾಂಧಿ ಮತ್ತು ಲಾಲ್ ಬಹಾದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸತ್ಯ, ಅಹಿಂಸೆ, ತ್ಯಾಗ ಮತ್ತು ಬಲಿದಾನದ ಸಂದೇಶವನ್ನು ಇಡೀ ಜಗತ್ತಿಗೆ ಸಾರಿದ ಹಾಗೂ ದೇಶದ ಕಲ್ಯಾಣಕ್ಕಾಗಿ ‘ಗ್ರಾಮ ಸ್ವರಾಜ್ ’ಎಂಬ ಪರಿಕಲ್ಪನೆಯನ್ನು ಜಾರಿಗೆ ತಂದು ಪ್ರಜೆಗಳೇ ಪ್ರಭುಗಳು ಎಂಬ ನೀತಿಯನ್ನು ಅನುಸರಿಸಿದವರು ಗಾಂಧೀಜಿ ಎಂದು ಬಣ್ಣಿಸಿದರು.

    ಲಾಲ್ ಬಹಾದೂರ್ ಶಾಸ್ತ್ರಿ ಅವರು ಆಗಿನ ಕಾಲಘಟ್ಟದಲ್ಲಿ ಶಿಕ್ಷಣ ಪಡೆಯಲು ನದಿಯನ್ನು ಈಜಿ ದಾಟಿ ಬಂದು ಶಾಲೆಯಲ್ಲಿ ಕಲಿತು ಇತಿಹಾಸ ಸೃಷ್ಟಿಸಿದ್ದರಲ್ಲದೆ, ದೇಶದ ಪ್ರಧಾನಿಯಾಗಿ ಸರಳ ಹಾಗೂ ಪ್ರಾಮಾಣಿಕ ಜೀವನ ನಡೆಸಿ ಇತರ ರಾಜಕಾರಣಿಗಳಿಗೆ ಮಾದರಿಯಾಗಿದ್ದರು ಎಂದು ಸ್ಮರಿಸಿದರು.
    ಕಾರ್ಯಕ್ರಮದ ನಂತರ ಕಂದಾಯ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ತಾಲೂಕು ಆಡಳಿತ ಭವನದ ಆವರಣವನ್ನು ಸ್ವಚ್ಛಗೊಳಿಸಿದರು.

    ತಾ.ಪಂ. ಇಒ ಡಿ.ಬಿ.ಸುನಿಲ್ ಕುಮಾರ್, ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಸೋಮಯ್ಯ, ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ ಮಾದೇಶ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್, ಆಹಾರ ಇಲಾಖೆ ಶಿರಸ್ತೇದಾರ್ ಸಣ್ಣಸ್ವಾಮಿ, ಗ್ರಂಥಾಲಯದ ಮೇಲ್ವಿಚಾರಕಿ ರೇವತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹರೀಶ್, ಕಂದಾಯ ಇಲಾಖೆ ಶಿರಸ್ತೇದಾರ್ ಶಕೀಲಾ ಬಾನು, ಕಂದಾಯ ನಿರೀಕ್ಷಕ ಪಾಂಡುರಂಗ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts