More

    ಪರದಾಡಿದ ರೋಗಿಗಳು

    ಹುಬ್ಬಳ್ಳಿ: ಆಯುಷ್ ವೈದ್ಯರಿಗೂ ಶಸ್ತ್ರಚಿಕಿತ್ಸೆಗೆ ಅವಕಾಶ ನೀಡಿರುವ ಕೇಂದ್ರ ಸರ್ಕಾರದ ನಿರ್ಧಾರ ಖಂಡಿಸಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಕರೆ ನೀಡಿದ್ದ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿ ನಗರದ ಖಾಸಗಿ ಆಸ್ಪತ್ರೆಗಳು ಶುಕ್ರವಾರ ಹೊರ ರೋಗಿಗಳ ವಿಭಾಗ (ಒಪಿಡಿ) ಬಂದ್ ಮಾಡಿದ್ದವು. ಇದರಿಂದ ರೋಗಿಗಳು ಪರದಾಡಿದರು.

    ನಗರದಲ್ಲಿ 500ಕ್ಕೂ ಅಧಿಕ ಖಾಸಗಿ ಆಸ್ಪತ್ರೆ, ನರ್ಸಿಂಗ್ ಹೋಮ್ ಹಾಗೂ ಕ್ಲಿನಿಕ್​ಗಳಿವೆ. 800ಕ್ಕೂ ಹೆಚ್ಚು ವೈದ್ಯರಿದ್ದಾರೆ. ನಗರದ ವಿವೇಕಾನಂದ ಆಸ್ಪತ್ರೆ, ತತ್ವದರ್ಶ, ಶಕುಂತಲಾ, ಬಾಲಾಜಿ, ಸುಚಿರಾಯು, ಶಿವಕೃಪಾ, ಕಾರಟಗಿ ಆಸ್ಪತ್ರೆ ಹಾಗೂ ಇತರ ಆಸ್ಪತ್ರೆಗಳ ಒಪಿಡಿ ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ಬಂದ್ ಮಾಡಲಾಗಿತ್ತು. ತುರ್ತು ಚಿಕಿತ್ಸಾ ಘಟಕ ಎಂದಿನಂತೆ ತೆರೆದಿತ್ತು.

    ಹಳ್ಳಿಗಳಿಂದ ಆಗಮಿಸಿದ್ದ ರೋಗಿಗಳು ವೈದ್ಯರಿಲ್ಲದ ಕಾರಣ ಚಿಕಿತ್ಸೆ ಪಡೆಯದೆ ವಾಪಸ್ ಹೋದರು. ಕೆಲವರು ಕಿಮ್್ಸ, ಚಿಟಗುಪ್ಪಿ ಆಸ್ಪತ್ರೆಗಳತ್ತ ಮುಖ ಮಾಡಿದರು. ಮುಷ್ಕರದಿಂದಾಗಿ ಕಿಮ್್ಸ ಹೊರ ರೋಗಿಗಳ ವಿಭಾಗದಲ್ಲಿ ರೋಗಿಗಳ ಸಂಖ್ಯೆ ಶೇ. 20ರಷ್ಟು ಹೆಚ್ಚಾಗಿತ್ತು. ಎಲ್ಲ ವೈದ್ಯರೂ ಕರ್ತವ್ಯಕ್ಕೆ ಹಾಜರಾಗಿದ್ದರಿಂದ ಯಾವುದೇ ಸಮಸ್ಯೆ ಆಗಲಿಲ್ಲ ಎಂದು ಕಿಮ್್ಸ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ತಿಳಿಸಿದ್ದಾರೆ.

    ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ: ಮುಷ್ಕರದ ಹಿನ್ನೆಲೆಯಲ್ಲಿ ಕಿಮ್್ಸ ಮುಖ್ಯದ್ವಾರದ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಭಾರತೀಯ ವೈದ್ಯಕೀಯ ಸಂಘ (ಐಎಂಎ)ದ ಹುಬ್ಬಳ್ಳಿ ಶಾಖೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಂಘದ ಅಧ್ಯಕ್ಷ ಡಾ. ಭರತ ಕ್ಷತ್ರಿ ಅವರು ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಪ್ರತಿಭಟನೆ ಆರಂಭಿಸಿದರು. ಈ ಕೂಡಲೆ ಕೇಂದ್ರ ಸರ್ಕಾರ ಆಯುಷ್ ವೈದ್ಯರಿಗೂ ಶಸ್ತ್ರಚಿಕಿತ್ಸೆ ಮಾಡಲು ನೀಡಿರುವ ಅನುಮತಿ ಕೈಬಿಡಬೇಕು ಎಂದು ಆಗ್ರಹಿಸಿದರು. ಡಾ. ನಿತೇಶ ಜೈನ್, ಡಾ. ಸದಾಶಿವ ಸೊಪ್ಪಿಮಠ, ಡಾ.ವಿವೇಕಾನಂದ, ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts