ಸರ್ವಜ್ಞರ ತತ್ವಾದರ್ಶ ಮನುಕುಲಕ್ಕೆ ಆದರ್ಶ

sarvajna jayanthi
ಕಾರ್ಕಳ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಕಾರ್ಕಳ ತಾಲೂಕು ಸರ್ವಜ್ಞ ವೃತ್ತದ ಬಳಿ ಸರ್ವಜ್ಞ ಜಯಂತಿ ಆಚರಿಸಲಾಯಿತು.
Published on

ಕಾರ್ಕಳ: ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಹಿಂದುಳಿದ ವರ್ಗಗಳ ಘಟಕ ಅಧ್ಯಕ್ಷ ಅನಿಲ್‌ಪೂಜಾರಿ ನೆಲ್ಲಿಗುಡ್ಡೆ ನೇತೃತ್ವದಲ್ಲಿ ಕಾರ್ಕಳ ತಾಲೂಕು ಸರ್ವಜ್ಞ ವೃತ್ತದ ಬಳಿ ಸರ್ವಜ್ಞ ಜಯಂತಿ ಆಚರಿಸಲಾಯಿತು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಮಾತನಾಡಿ, ತ್ರಿಪದಿಬ್ರಹ್ಮ ತತ್ವಜ್ಞಾನಿ ಸರ್ವಜ್ಞರ ತತ್ವಾದರ್ಶ ಮನುಕುಲಕ್ಕೆ ಆದರ್ಶ. ಸರ್ವಜ್ಞರ ಅನುಯಾಯಿಗಳಾದ ಕುಲಾಲ ಸಮಾಜದ ಜಾತ್ಯತೀತ ತತ್ವಗಳೊಂದಿಗೆ ಹೊಂದಾಣಿಕೆ ಬದುಕು ನಡೆಸುತ್ತಿರುವುದು ಶ್ಲಾಘನೀಯ ಎಂದರು.

ಕುಲಾಲ ಸಮಾಜ ಮುಖಂಡ ಕುಶ ಆರ್.ಮೂಲ್ಯ ಮಾತನಾಡಿ, ಸರ್ವಜ್ಞರು ತ್ರಿಪದಿ ಸಾಹಿತ್ಯದ ಮೇರು ಕವಿಗಳಾಗಿದ್ದು, ಸಂತಕವಿ ಎಂದೇ ಪ್ರಸಿದ್ದಿ ಪಡೆದ ಅವರ ಜೀವನಾದರ್ಶಗಳು ಪ್ರೇರಣೆಯಾಗಿದೆ ಎಂದರು.

ಕುಕ್ಕುಂದೂರು ಗ್ರಾಪಂ ಅಧ್ಯಕ್ಷೆ ಉಷಾ ಮೋಹನ್, ಬ್ಲಾಕ್ ಉಪಾಧ್ಯಕ್ಷ ಜಾರ್ಜ್ ಕ್ಯಾಸ್ತಲಿನೋ, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಭಾನು ಭಾಸ್ಕರ್ ಪೂಜಾರಿ, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೀನಾ ಡಿಸೋಜ, ಭೂನ್ಯಾಯ ಮಂಡಳಿ ಸದಸ್ಯ ಸುನೀಲ್ ಭಂಡಾರಿ, ಗ್ಯಾರಂಟಿ ಸಮಿತಿ ಸದಸ್ಯ ಪಿಲಿಪ್ ಮಸ್ಕರೇನಸ್, ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯೋಗೀಶ್ ಆಚಾರ್ಯ ಇನ್ನಾ, ಅಕ್ರಮ ಸಕ್ರಮ ಸದಸ್ಯೆ ಸುನೀತಾ ಶೆಟ್ಟಿ, ಮಾಜಿ ಪುರಸಭಾ ಅಧ್ಯಕ್ಷೆ ಪ್ರತಿಮಾ ರಾಣೆ, ವಿಶ್ವನಾಥ್ ಭಂಡಾರಿ, ಕುಕ್ಕುಂದೂರು ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ರುಕ್ಮಯ ಶೆಟ್ಟಿಗಾರ್, ಸಂತೋಷ್ ಶೆಟ್ಟಿ, ದಿನಕರ್ ಶೆಟ್ಟಿ ಪಳ್ಳಿ, ವಿಶ್ವನಾಥ್ ಪಳ್ಳಿ, ಶೋಭಾ ಮತ್ತಿತರರು ಉಪಸ್ಥಿತರಿದ್ದರು. ಬ್ಲಾಕ್ ವಕ್ತಾರ ಪ್ರದೀಪ್ ಬೇಲಾಡಿ ಕಾರ್ಯಕ್ರಮ ನಿರೂಪಿಸಿದರು. ಗ್ಯಾರಂಟಿ ಯೋಜನೆ ಸದಸ್ಯ ಹೇಮಂತ್ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net