More

    ಪೋಲಿಯೋ ಲಸಿಕಾ ಕಾರ್ಯಕ್ರಮ

    ರಾಣೆಬೆನ್ನೂರ: ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಶಾಸಕ ಅರುಣಕುಮಾರ ಪೂಜಾರ ಹೇಳಿದರು.

    ತಾಲೂಕಿನ ಕವಲೆತ್ತು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಭಾನುವಾರ ಆಯೋಜಿಸಿದ್ದ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

    ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ ಜ. 19ರಿಂದ ತಾಲೂಕಿನ ವ್ಯಾಪ್ತಿಯಲ್ಲಿ ಆರಂಭವಾಗಿ ನಿರಂತರವಾಗಿ 3 ದಿನಗಳ ಕಾಲ ಇರಲಿದೆ. ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿರುವ ಚಿಕ್ಕ ಮಕ್ಕಳನ್ನು ಪೋಲಿಯೋ ಬೂತ್​ಗೆ ಕರೆದೊಯ್ಯುವ ಮೂಲಕ ಲಸಿಕೆ ಹಾಕಿಸಿ ಎಂದು ಮನವಿ ಮಾಡಿದರು.

    ತಾಲೂಕು ಆರೋಗ್ಯಾಧಿಕಾರಿ ಡಾ. ಸಂತೋಷಕುಮಾರ, ಜಿಪಂ ಸದಸ್ಯೆ ಮಂಗಳಗೌರಿ ಪೂಜಾರ, ಗ್ರಾಪಂ ಅಧ್ಯಕ್ಷ ಅಷ್ಟಮೂರ್ತಿ ಓಲೇಕಾರ, ಪ್ರಮುಖರಾದ ವೆಂಕಟೇಶ ಕೋಡೆರ, ಹಜರತಸಾಬ ಹಾಗೂ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕಿಯರು, ಸಿಬ್ಬಂದಿ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts