More

    ಬಡ ಕೂಲಿ ಕಾರ್ಮಿಕರಿಗೆ ನರೇಗಾ ಆಸರೆ

    ರಾಯಬಾಗ: ಬಡ ಕೂಲಿ ಕಾರ್ಮಿಕರಿಗೆ ನೆರವಾಗಲು ಸರ್ಕಾರ ನರೇಗಾ ಯೋಜನೆಯಡಿ ಬದು ನಿರ್ಮಾಣ ಮಾಸಾಚರಣೆ ಅಭಿಯಾನ ಕೈಗೊಂಡಿದೆ. ಎಲ್ಲ ಕೂಲಿ ಕಾರ್ಮಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕುಡಚಿ ಶಾಸಕ ಪಿ. ರಾಜೀವ್ ಹೇಳಿದರು.

    ತಾಲೂಕಿನ ಕಟಕಬಾವಿ ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ರೈತರ ಜಮೀನಿನಲ್ಲಿ ಬದು ನಿರ್ಮಾಣ ಮಾಸಾಚರಣೆ ಅಭಿಯಾನಕ್ಕೆ ಇತ್ತೀಚೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕೆಲಸದ ಸ್ಥಳದಲ್ಲಿ ಕೂಲಿ ಕಾರ್ಮಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು, ದೈಹಿಕ ಅಂತರ ಕಾಯ್ದುಕೊಳ್ಳಬೇಕು ಎಂದರು. ತಾಲೂಕು ಪಂಚಾಯಿತಿ ಇಒ ಪ್ರಕಾಶ ವಡ್ಡರ ಮಾತನಾಡಿ, ನರೇಗಾ ಯೋಜನೆಯಡಿ ಮೇ 19 ರಿಂದ ಜೂನ್ 19 ರವರೆಗೆ ಬದು ನಿರ್ಮಾಣ ಮಾಸಾಚರಣೆ ಹಮ್ಮಿಕೊಳ್ಳಲಾಗಿದೆ ಎಂದರು.

    ಜಿಪಂ ಇಂಜನಿಯರ್ ಆರ್.ಎಫ್. ಹಂದಿಗುಂದ, ಕೃಷಿ ಅಧಿಕಾರಿ ಇಂದುಧರ ಹಿರೇಮಠ, ಸುದೀಪ ಚೌಗಲಾ, ನಿಂಗಪ್ಪ ಪಕಾಂಡಿ, ಮುತ್ತುರಾಜ ಗದಾಡಿ, ಮಲ್ಲಪ್ಪ ಕಾಂಬಳೆ, ಭೀಮಪ್ಪ ಬಶೆಟ್ಟಿ, ಬಸಗೌಡ ಪಾಟೀಲ, ದುಂಡಪ್ಪ ಪಾಟೀಲ, ಭೀಮಪ್ಪ ಪಿಡಾಯಿ, ತಾಪಂ ಸಿಬ್ಬಂದಿ, ಗ್ರಾಪಂ ಸದಸ್ಯರು ಉಪಸ್ಥಿತರಿದ್ದರು.

    ಅಥಣಿ ವರದಿ: ಕರೊನಾ ವೈರಸ್ ಹಿನ್ನೆಲೆಯಲ್ಲಿ ಲಾಕ್‌ಡೌನ್‌ನಿಂದ ಸಮಸ್ಯೆಯಲ್ಲಿ ಸಿಲುಕಿರುವ ಗ್ರಾಮೀಣ ಕೂಲಿ ಕಾರ್ಮಿಕರ ಆರ್ಥಿಕ ಸ್ಥಿತಿ ಸುಧಾರಣೆಗೆ ಸರ್ಕಾರ ರೈತರ ಜಮೀನಿನಲ್ಲಿ ಬದು ನಿರ್ಮಾಣ ಮಾಸಾಚರಣೆ ವಿಶೇಷ ಯೋಜನೆ ರೂಪಿಸಿದೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರವಿ ಬಂಗಾರೆಪ್ಪನವರ ಹೇಳಿದರು. ಕೃಷಿ ಇಲಾಖೆ ಮತ್ತು ತಾಲೂಕು ಪಂಚಾಯಿತಿ ಸಹಯೋಗದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಬದು ನಿರ್ಮಾಣ ಅಭಿಯಾನದ ಪ್ರಚಾರ ವಾಹಿನಿ ರಥಕ್ಕೆ ತಾಪಂ
    ಆವರಣದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು. ಕಾಗವಾಡ ತಾಪಂ ಇಒ ವೀರನಗೌಡ ಏಗನಗೌಡರ ಮತ್ತು ಕೃಷಿ ಇಲಾಖೆಯ ಗ್ರಾಮ ಸಹಾಯಕರಾದ ರವಿ ಬಂಗಾರಿ, ನಾಮದೇವ ಲಮಾಣಿ, ಇತರರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts