More

    ಜುಲೈ 18ರಂದು ರಾಷ್ಟ್ರಪತಿ ಚುನಾವಣೆ, 25ಕ್ಕೆ ನೂತನ ರಾಷ್ಟ್ರಪತಿಯಿಂದ ಅಧಿಕಾರ ಸ್ವೀಕಾರ

    ನವದೆಹಲಿ: ರಾಷ್ಟ್ರಪತಿ ಚುನಾವಣಾ ದಿನಾಂಕವನ್ನು ಘೋಷಿಸಲಾಗಿದ್ದು, ಜುಲೈ 24ಕ್ಕೆ ಈಗಿನ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರ ಅಧಿಕಾರವಧಿ ಕೊನೆಗೊಳ್ಳಲಿದೆ.

    ಜುಲೈ 18 ರಂದು ಚುನಾವಣೆ ನಡೆಯಲಿದ್ದು, ಜುಲೈ 21ಕ್ಕೆ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಚುನಾವಣಾ ಆಯೋಗದ ಅಧ್ಯಕ್ಷ ರಾಜೀವ್​ ಕುಮಾರ್​ ತಿಳಿಸಿದ್ದಾರೆ.

    ಆಯ್ಕೆಯಾಗುವ ಹೊಸ ರಾಷ್ಟ್ರಪತಿ ಅವರು ಜುಲೈ 25ಕ್ಕೆ ಅಧಿಕಾರ ಸ್ವೀಕರಿಸಲಿದ್ದು, 2022 ರ ರಾಷ್ಟ್ರಪತಿ ಚುನಾವಣೆಯಲ್ಲಿ ಒಟ್ಟು 4,809 ಮತದಾರರು ಮತಚಲಾಯಿಸಲಿದ್ದಾರೆ. ಯಾವುದೇ ರಾಜಕೀಯ ಪಕ್ಷವು ತನ್ನ ಸದಸ್ಯರಿಗೆ ವಿಪ್​ ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

    ಸಂಸತ್ತಿನ ಎರಡೂ ಸದನಗಳ ಚುನಾಯಿತ ಸದಸ್ಯರು ಮತ್ತು ದೆಹಲಿ ಮತ್ತು ಪದುಚೇರಿ ಕೇಂದ್ರಾಡಳಿತ ಪ್ರದೇಶ ಸೇರಿದಂತೆ ಎಲ್ಲಾ ರಾಜ್ಯಗಳ ಶಾಸಕಾಂಗ ಸಭೆಗಳ ಚುನಾಯಿತ ಸದಸ್ಯರು ಮತ ಚಲಾಯಿಸಲಿದ್ದಾರೆ.

    ರಾಜ್ಯಸಭೆ ಮತ್ತು ಲೋಕಸಭೆ ಅಥವಾ ರಾಜ್ಯಗಳ ಶಾಸಕಾಂಗ ಸಭೆಗಳ ನಾಮನಿರ್ದೇಶಿತ ಸದಸ್ಯರು ಹಾಗೂ ವಿಧಾನಪರಿಷತ್ತಿನ ಸದಸ್ಯರು ಈ ಚುನಾವಣೆಯಲ್ಲಿ ಭಾಗವಹಿಸಲು ಅರ್ಹರಾಗುವುದಿಲ್ಲ. (ಏಜೆನ್ಸೀಸ್​)

    VIDEO: ಕಪ್ಪು ರಣಹದ್ದು ಜತೆ ಪ್ಯಾರಾಗ್ಲೈಡಿಂಗ್! ಟ್ವಿಟ್ಟಿಗರಿಂದ ಭಾರೀ ಮೆಚ್ಚುಗೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts