ಜುಲೈ 18ರಂದು ರಾಷ್ಟ್ರಪತಿ ಚುನಾವಣೆ, 25ಕ್ಕೆ ನೂತನ ರಾಷ್ಟ್ರಪತಿಯಿಂದ ಅಧಿಕಾರ ಸ್ವೀಕಾರ

ನವದೆಹಲಿ: ರಾಷ್ಟ್ರಪತಿ ಚುನಾವಣಾ ದಿನಾಂಕವನ್ನು ಘೋಷಿಸಲಾಗಿದ್ದು, ಜುಲೈ 24ಕ್ಕೆ ಈಗಿನ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರ ಅಧಿಕಾರವಧಿ ಕೊನೆಗೊಳ್ಳಲಿದೆ. ಜುಲೈ 18 ರಂದು ಚುನಾವಣೆ ನಡೆಯಲಿದ್ದು, ಜುಲೈ 21ಕ್ಕೆ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಚುನಾವಣಾ ಆಯೋಗದ ಅಧ್ಯಕ್ಷ ರಾಜೀವ್​ ಕುಮಾರ್​ ತಿಳಿಸಿದ್ದಾರೆ. ಆಯ್ಕೆಯಾಗುವ ಹೊಸ ರಾಷ್ಟ್ರಪತಿ ಅವರು ಜುಲೈ 25ಕ್ಕೆ ಅಧಿಕಾರ ಸ್ವೀಕರಿಸಲಿದ್ದು, 2022 ರ ರಾಷ್ಟ್ರಪತಿ ಚುನಾವಣೆಯಲ್ಲಿ ಒಟ್ಟು 4,809 ಮತದಾರರು ಮತಚಲಾಯಿಸಲಿದ್ದಾರೆ. ಯಾವುದೇ ರಾಜಕೀಯ ಪಕ್ಷವು ತನ್ನ ಸದಸ್ಯರಿಗೆ ವಿಪ್​ ಜಾರಿಗೊಳಿಸಲು ಸಾಧ್ಯವಿಲ್ಲ ಎಂದು … Continue reading ಜುಲೈ 18ರಂದು ರಾಷ್ಟ್ರಪತಿ ಚುನಾವಣೆ, 25ಕ್ಕೆ ನೂತನ ರಾಷ್ಟ್ರಪತಿಯಿಂದ ಅಧಿಕಾರ ಸ್ವೀಕಾರ