ಭ್ರಷ್ಟಾಚಾರ ಮುಕ್ತ ಬಿಜೆಪಿ ಅಧಿಕಾರಕ್ಕೆ ತನ್ನಿ

ಬಾಳೆಹೊನ್ನೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರನ್ನು ಗೆಲ್ಲಿಸುವ ಮೂಲಕ ಕೇಂದ್ರದಲ್ಲಿ ಮತ್ತೊಮ್ಮೆ ಭ್ರಷ್ಟಾಚಾರ ಮುಕ್ತ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು ಪಕ್ಷದ ಜಿಲ್ಲಾಧ್ಯಕ್ಷ ಡಿ.ಎನ್.ಜೀವರಾಜ್ ಹೇಳಿದರು.

ಖಾಂಡ್ಯ ಹೋಬಳಿಯ ಹುಯಿಗೆರೆ, ಸಾರಗೋಡು, ಬಿಕ್ಕರಣೆ, ಮಣಬೂರು, ಹುಣಸೇಹಳ್ಳಿ, ಕರಗಣೆ, ಅಂಡವಾನೆ, ಕಡಬಗೆರೆ, ಕೋದಿ, ಶಿರಗೋಳ ಮುಂತಾದೆಡೆ ಬಿಜೆಪಿ ಪರ ಮತ ಯಾಚನೆ ಮಾಡಿ ಮಾತನಾಡಿದರು.

ದೇಶದ ಭವಿಷ್ಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ಮಾಡಿದ ಸಾಧನೆಗಳು, ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಅವರ ಅಭಿವೃದ್ಧಿ ಕಾರ್ಯಗಳು ಹಾಗೂ ಬಿಜೆಪಿ ತತ್ವ, ಸಿದ್ಧಾಂತಗಳ ಕುರಿತು ತಿಳಿಸಿ ಮತ್ತೊಮ್ಮೆ ಬಿಜೆಪಿ ಗೆಲ್ಲಿಸಬೇಕು ಎಂದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಟಿ.ಎಂ.ಉಮೇಶ್ ಕಲ್ಮಕ್ಕಿ ಮಾತನಾಡಿ, ಸ್ವಾವಲಂಬನೆ, ಉದ್ಯೋಗಾವಕಾಶ ಮತ್ತು ಬಡತನ ನಿಮೂಲನೆ, ಮೂಲ ಸೌಕರ್ಯ ಅಭಿವೃದ್ಧಿ, ತ್ವರಿತ ಅನುಷ್ಠಾನ ಹಾಗೂ ದೇಶವನ್ನು ದಶ ದಿಕ್ಕುಗಳಲ್ಲಿ ಅಭಿವೃದ್ಧಿಗೊಳಿಸಿದ ಬಿಜೆಪಿ ಸರ್ಕಾರವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವ ಜವಾಬ್ಧಾರಿ ಎಲ್ಲ ಮತದಾರರ ಮೇಲಿದೆ ಎಂದು ಹೇಳಿದರು.