More

    ಸಾವು ಗೆದ್ದ 41 ಕಾರ್ಮಿಕರು! 17 ದಿನದ ಬಳಿಕ ಸುರಂಗದಿಂದ ಹೊರಕ್ಕೆ, ಒಬ್ಬೊಬ್ಬರನ್ನು ಹೊರ ಕರೆತರುತ್ತಿರುವ NDRF

    ಡೆಹ್ರಾಡೂನ್​: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಸಿಲ್ಕ್​ಯಾರ್​ ಸುರಂಗದೊಳಗೆ ಸಿಲುಕಿ, ಕಳೆದ 17 ದಿನಗಳಿಂದ ಜೀವ ಕೈಯಲ್ಲಿ ಹಿಡಿದುಕೊಂಡು ರಕ್ಷಣೆಗಾಗಿ ಎದುರು ನೋಡುತ್ತಿದ್ದ 41 ಕಾರ್ಮಿಕರಲ್ಲಿ ಮೊದಲ ಹಂತದಲ್ಲಿ ಐವರು ಕಾರ್ಮಿಕರನ್ನು ಸುರಂಗದಿಂದ ಹೊರಗೆ ಕರೆತರಲಾಯಿತು. ಕಾರ್ಮಿಕರನ್ನು ಒಬ್ಬೊಬ್ಬರಾಗಿ ಪೈಪ್​ ಮೂಲಕ ಹೊರಗೆ ಕರೆತರಲಾಗುತ್ತಿದ್ದು, ಈವರೆಗೆ 21 ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ.

    ಮೊದಲ ಹಂತದಲ್ಲಿ ಹೊರಬಂದ ಐವರು ಕಾರ್ಮಿರಿಗೆ ಪ್ರಾಥಮಿಕ ಚಿಕಿತ್ಸೆಯನ್ನು ನೀಡಿ ಆಂಬ್ಯುಲೆನ್ಸ್​ ಮೂಲಕ ಹೆಚ್ಚಿನ ಚಿಕಿತ್ಸೆಗೆಂದು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದ ಕಾರ್ಮಿಕರ ರಕ್ಷಣೆಗೆ ಮೂರು ಎನ್​ಡಿಆರ್​ಎಫ್​ ತಂಡಗಳು ಸುರಂಗದ ಒಳಗಡೆ ಪ್ರವೇಶಿಸಿ, ರಕ್ಷಣಾ ಕಾರ್ಯದಲ್ಲಿ ತೊಡಗಿವೆ. ಕಾರ್ಮಿಕರು ಹೊರ ಬರುತ್ತಿದ್ದಂತೆ ಸುರಂಗದ ಹೊರಗಡೆ ಜೈಕಾರಗಳು ಮೊಳಗಿದವು. ಎಲ್ಲ 41 ಕಾರ್ಮಿಕರನ್ನು ಹೊರಗೆ ಕರೆತರಲು ಸುಮಾರು 1 ಗಂಟೆ ತೆಗೆದುಕೊಳ್ಳುತ್ತದೆ ಎಂದು ರಕ್ಷಣಾ ಪಡೆಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಸತತ 17 ದಿನಗಳ ಕಾಲ ಹಗಲು ರಾತ್ರಿ ಎನ್ನದೆ ನಿರಂತರವಾಗಿ ರಕ್ಷಣಾ ಕಾರ್ಯಾದಲ್ಲಿ ತೊಡಗಿದ ಎಲ್ಲ ರಕ್ಷಣಾ ಪಡೆಗಳ ಶ್ರಮಕ್ಕೆ ಇಂದು ಫಲ ಸಿಕ್ಕಿದೆ. 17 ದಿನಗಳಿಂದ ಕತ್ತಲೆ ಕೂಪದಲ್ಲಿ, ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬೆಳಕಿಗಾಗಿ ಪರಿತಪಿಸುತ್ತಾ, ನೆಚ್ಚಿನ ದೇವರಲ್ಲಿ ಇನ್ನೊಂದು ಅವಕಾಶಕ್ಕಾಗಿ ಬೇಡಿಕೊಳ್ಳುತ್ತಿದ್ದ ಕಾರ್ಮಿಕರ ಬೇಡಿಕೆ ಇಂದು ಫಲಿಸಿದೆ. ಅಲ್ಲದೆ, ಸುರಂಗದಲ್ಲಿ ತಮ್ಮ ಕುಟುಂಬದ ಸದಸ್ಯನೊಬ್ಬ ಸಿಲುಕಿಕೊಂಡು, ಸರಿಯಾದ ಊಟ, ನಿದ್ರೆ ಇಲ್ಲದೆ, ಪ್ರತಿಕ್ಷಣ ಸಾವಿನ ಜತೆ ಹೋರಾಡುತ್ತಾ ಇರುವುದನ್ನು ಕಂಡು, ಅವರಿಗಾಗಿ ಮರುಗಿ, ಪ್ರತಿದಿನ ಅವರ ಬರುವಿಕೆಗಾಗಿ ದೇವರ ಬಳಿ ನಿತ್ಯವೂ ಬೇಡಿಕೊಳ್ಳುತ್ತಿದ್ದ ಕುಟುಂಬದವರ ಪ್ರಾರ್ಥನೆಯೂ ಸಹ ಇಂದು ಫಲಿಸಿದೆ. ಸರ್ಕಾರದ ಸಕಾಲ ನೆರವಿಗೂ ಒಂದು ಬೆಲೆ ಬಂದಿದೆ.

    ನುರಿತ ಕಾರ್ಮಿಕರ ತಂಡವು ಇಲಿ-ಕುಳಿ ಗಣಿಗಾರಿಕೆ ತಂತ್ರವನ್ನು ಬಳಸಿಕೊಂಡು ಕೈಯಿಂದ ರಂಧ್ರ ಕೊರೆಯುವ ಮೂಲಕ ಅಂತಿಮ ಹಂತದ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿದೆ. 800-ಎಂಎಂ ವ್ಯಾಸದ ಪೈಪ್ ಅನ್ನು ಆಗರ್ ಯಂತ್ರದಿಂದ ಅವಶೇಷಗಳ ಮೂಲಕ ಸೇರಿಸಲಾಗಿದ್ದು, ಅದರ ಮೂಲಕ ಕಾರ್ಮಿಕರನ್ನು ಹೊರಗೆ ಕರೆತರಲಾಗುತ್ತಿದೆ. ಈ ಮೊದಲು ಬೃಹತ್ ಆಗರ್ ಯಂತ್ರದ ಮೂಲಕ ಈ ಕೊರೆತವನ್ನು ನಡೆಸಲಾಗಿತ್ತು. ಆದರೆ, ಕಳೆದ ಶುಕ್ರವಾರ ಈ ಯಂತ್ರವು 47 ಮೀಟರ್‌ನಲ್ಲಿ ಅವಶೇಷಗಳಡಿ ಸಿಲುಕಿ ಛಿದ್ರವಾಗಿತ್ತು.

    ಕುಸಿದ ಸುರಂಗದಲ್ಲಿ ಕಳೆದ 17 ದಿನಗಳಿಂದ ಸಿಲುಕಿದ್ದ 41 ಕಾರ್ಮಿಕರನ್ನು ದೊಡ್ಡ ಪೈಪ್​ ಮೂಲಕ ಹಗ್ಗ ಕಟ್ಟಿದ ಗಾಲಿ ಸ್ಟ್ರೆಚರ್ ನೆರವಿನಿಂದ ಒಬ್ಬೊಬ್ಬರಾಗಿ ಹೊರಗೆಳೆದು ರಕ್ಷಣೆ ಮಾಡಲಾಗುತ್ತಿದೆ. ಪೈಪ್​ಗಳನ್ನು ವೆಲ್ಡಿಂಗ್​ ಮಾಡಿರುವ ಕಾರಣ ಕಾರ್ಮಿಕರು ತೆವಳುವಾಗ ತರಚಿ ಗಾಯಗಳಾಗಬಹುದು ಎಂಬ ಕಾರಣಕ್ಕೆ ಗಾಲಿ ಸ್ಟ್ರೆಚರ್​ ಸಹಾಯದಿಂದ ಹೊರಗೆ ಕರೆತರುತ್ತಿದ್ದಾರೆ. ಕಳೆದ 17 ದಿನಗಳಿಂದ ಯಾವುದೇ ನೈಸರ್ಗಿಕ ಬೆಳಕು ಮತ್ತು ಸಂಪೂರ್ಣ ಊಟವಿಲ್ಲದೆ ಸುರಂಗದ ಭಗ್ನಾವಶೇಷಗಳ ಅಡಿಯಲ್ಲಿ ಜೀವವನ್ನು ಕೈಯಲ್ಲಿ ಹಿಡಿದು ನಿತ್ರಾಣಗೊಂಡಿರುವ ಕಾರ್ಮಿಕರಿಗೆ ತೆವಳುವುದು ತುಂಬಾ ಕಷ್ಟ. ಹೀಗಾಗಿ ಗಾಲಿ ಸ್ಟ್ರೆಚರ್​ ರಕ್ಷಣಾ ಕಾರ್ಯಕರ್ತರ ಪ್ರಧಾನ ಆಯ್ಕೆಯಾಗಿದೆ.

    ಕೆಲವೇ ಕ್ಷಣಗಳಲ್ಲಿ ಸಿಲ್ಕ್​ಯಾರಾ ಸುರಂಗದಿಂದ ಕಾರ್ಮಿಕರು ಹೊರಕ್ಕೆ: ಹೂವಿನ ಹಾರದ ಸ್ವಾಗತಕ್ಕೆ ಸಜ್ಜು

    ಚೀನಾ ಸ್ಲೋಸ್ ಇಂಡಿಯಾ ಗ್ರೋಸ್; ಆರ್ಥಿಕತೆಯಲ್ಲಿ ಚೀನಾವನ್ನು ಹಿಂದಿಕ್ಕಲಿದೆಯೇ ಭಾರತ?

    ಕಡಿಮೆ ನೀರಿನಲ್ಲಿ ಹೆಚ್ಚು ಇಳುವರಿ ತರುವ ಬೆಳೆ ಪರಿಚಯಿಸಿ: ಚಲುವರಾಯಸ್ವಾಮಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts