

ಸುಳ್ಯ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಆಯೋಜಿಸಲಾದ ಬೃಹತ್ ಮಾನವ ಸರಪಳಿ ಕಾರ್ಯಕ್ರಮ ಸುಳ್ಯ ತಾಲೂಕಿನಲ್ಲಿ ಯಶಸ್ವಿಯಾಗಿ ನಡೆಯಿತು.
ತಾಲೂಕಿನ ಕನಕಮಜಲು ರಾಷ್ಟ್ರೀಯ ಹೆದ್ದಾರಿಯಿಂದ ಸಂಪಾಜೆ ಗಡಿಯವರೆಗೂ ಸಾವಿರಾರು ಮಂದಿ ಭಾಗವಹಿಸಿ ಮಾನವ ಸರಪಳಿ ನಿರ್ಮಿಸಿದರು.
ಸರ್ಕಾರೇತರ ಸಂಸ್ಥೆಗಳು, ಸಾರ್ವಜನಿಕ ವಲಯ ಉದ್ಯಮಗಳು, ಖಾಸಗಿ ವಲಯ, ಸಂ&ಸಂಸ್ಥೆಗಳು, ಹಾದು ಹೋಗುವ ಗ್ರಾಮ ಪಂಚಾಯಿತಿ, ನಗರ ಸ್ಥಳಿಯ ಸಂಸ್ಥೆಗಳು, ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು, ಸಾರ್ವಜನಿಕರು, ಸ್ವಸಹಾಯ ಸಂಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಎಲ್ಲ ಇಲಾಖೆಗಳ ಅಧಿಕಾರಿ ಸಿಬ್ಬಂದಿ ಭಾಗವಹಿಸಿದ್ದರು.
ನಗರದ ಜ್ಯೋತಿ ಸರ್ಕಲ್ ಬಳಿ ನಡೆದ ಕಾರ್ಯಕ್ರಮವನ್ನು ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿ ಪ್ರಜಾಪ್ರಭುತ್ವದ ಮಹತ್ವದ ಬಗ್ಗೆ ಸಂದೇಶ ಸಾರಿದರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ನಪಂ ಅಧ್ಯೆ ಶಶಿಕಲಾ ನೀರಬಿದಿರೆ, ಉಪಾಧ್ಯಕ್ಷ ಬುದ್ಧ ನಾಯ್ಕ್, ತಹಸೀಲ್ದಾರ್ ಎಂ.ಮಂಜುನಾಥ್, ತಾಪಂ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಮುಖಂಡರಾದ ಪಿ.ಸಿ.ಜಯರಾಮ, ವೆಂಕಟ್ ದಂಬೆಕೋಡಿ, ಎಂ.ವೆಂಕಪ್ಪ ಗೌಡ ಮೊದಲಾದವರಿದ್ದರು.
ಸುಳ್ಯದ ಕಲ್ಚರ್ಪೆ ಹೋರಾಟ ಸಮಿತಿ ಸದಸ್ಯರು, ಕಲ್ಚರ್ಪೆಯಲ್ಲಿ ತ್ಯಾಜ್ಯ ರಾಶಿ ಹಾಕುವುದರಿಂದ ಸಮಸ್ಯೆಯಾಗುತ್ತದೆ ಎಂದು ಆರೋಪಿಸಿ ಕಪ್ಪು ಪಟ್ಟಿ ಧರಿಸಿ ಕೈಯಲ್ಲಿ ಕಪ್ಪು ಬಾವುಟ ಹಿಡಿದು ಮಾನವ ಸರಪಳಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಟನೆ ತಿಳಿದ ಸುಳ್ಯ ತಹಸೀಲ್ದಾರ್, ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪ್ರತಿಭಟನಾಕಾರರಿಗೆ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಬಳಿಕ ಪ್ರತಿಭಟನಕಾರರು ಕಪ್ಪು ಪಟ್ಟಿ ತೆರವುಗೊಳಿಸಿದರು. ಪ್ರತಿಭಟನೆಯಲ್ಲಿ ಹೋರಾಟ ಸಮಿತಿಯ ಮುಖಂಡರಾ ಕೆ.ಗೋಕುಲ್ ದಾಸ್, ಅಶೋಕ್ ಪೀಚೆ, ಬಾಲಚಂದ್ರ ಮೊದಲಾದವರಿದ್ದರು.