More

    ಹನುಮ ಧ್ವಜ ತೆರವು ದುರುದ್ದೇಶಪೂರ್ವಕ

    ಚಿಕ್ಕಮಗಳೂರು: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಉದ್ದೇಶಪೂರ್ವಕವಾಗಿ ಹನುಮ ಧ್ವಜ ತೆರವುಗೊಳಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಯಾರು ಹನುಮ ಧ್ವಜ ತೆರವುಗೊಳಿಸಿದ್ದಾರೆಯೋ ಅವರೇ ಧ್ವಜ ಹಾರಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಸೋಮವಾರ ಪಕ್ಷದ ಕಚೇರಿಯಿಂದ ಆಜಾದ್ ಪಾರ್ಕ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

    ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದುಗಳ ಭಾವನೆಗೆ ಧಕ್ಕೆ ತರುವ ಕೆಲಸ ಮಾಡುತ್ತಲೇ ಇದೆ. ಈ ಹಿಂದೆ ಹುಬ್ಬಳ್ಳಿಯಲ್ಲಿ ರಾಷ್ಟ್ರಧ್ವಜ ಹಾರಿಸಲು ಮುಂದಾದ ಹಿಂದುಗಳ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು. ಈ ಬಾರಿ ಹಿಂದುಗಳು ಹಾರಿಸಿದ ಹನುಮ ಧ್ವಜ ಕೆಳಗಿಳಿಸಲಾಗಿದೆ. ಈ ಮೂಲಕ ಸಿದ್ದರಾಮಯ್ಯ ಸರ್ಕಾರ ಹಿಂದು ವಿರೋಧಿ ಎಂಬುದನ್ನು ಸಾಬೀತುಪಡಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಬಿಜೆಪಿ ನಿಯೋಜಿತ ಜಿಲ್ಲಾಧ್ಯಕ್ಷ ದೇವರಾಜ ಶೆಟ್ಟಿ, ಸಿದ್ದರಾಮಯ್ಯ ಸರ್ಕಾರ ಹಿಂದುಗಳ ಭಾವನೆಗೆ ಪದೇಪದೆ ಧಕ್ಕೆ ತರುವ ಕೆಲಸ ಮಾಡುತ್ತಿದೆ. ಇದೇ ರೀತಿಯ ಮನಸ್ಥಿತಿ ಮುಂದುವರಿದಲ್ಲಿ ಜನರೇ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ. ಜತೆಗೆ ಮುಂಬರುವ ಲೋಕಸಭಾ ಚುನಾವಣೆ ಸೇರಿ ಎಲ್ಲ ಚುನಾವಣೆಗಳಲ್ಲಿ ಪ್ರತ್ಯುತ್ತರ ನೀಡಲಿದ್ದಾರೆ ಎಂದು ಎಚ್ಚರಿಸಿದರು.
    ಅಲ್ಪಸಂಖ್ಯಾತರನ್ನು ಓಲೈಕೆ ಮಾಡುವ ಉದ್ದೇಶದಿಂದ ಪದೇಪದೆ ಹಿಂದು ವಿರೋಧಿ ನೀತಿಯನ್ನು ರಾಜ್ಯ ಸರ್ಕಾರ ತಳೆಯುತ್ತಿದೆ. ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ಹಾರಿಸುವುದಕ್ಕೆ ಯುವಕರು ಅನುಮತಿ ಪಡೆದಿದ್ದರು. ರಾಷ್ಟ್ರೀಯ ಹಬ್ಬಗಳ ದಿನದಂದು ರಾಷ್ಟ್ರ ಧ್ವಜ ಹಾಗೂ ರಾಜ್ಯೋತ್ಸವ ದಿನದಂದು ಕನ್ನಡ ಧ್ವಜ ಹಾರಿಸಲಾಗುವುದು. ಇನ್ನುಳಿದಂತೆ ಹನುಮಧ್ವಜ ಹಾರಿಸುವುದಾಗಿ ಅನುಮತಿ ಪಡೆದಿದ್ದರು. ಹೀಗಿದ್ದರೂ ಉದ್ದೇಶಪೂರ್ವಕವಾಗಿ ಹನುಮ ಧ್ವಜ ತೆರವು ಮಾಡಿಸಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
    ಬಿಜೆಪಿ ಮುಖಂಡರಾದ ಮಧುಕುಮಾರ್‌ರಾಜ್ ಅರಸ್, ಸಂತೋಷ್ ಕೋಟ್ಯಾನ್, ಟಿ.ರಾಜಪ್ಪ, ಕವಿತಾ ಶೇಖರ್, ಜೆಸಿಂತಾ ಅನಿಲ್‌ಕುಮಾರ್, ಪುಷ್ಪರಾಜ್, ನಾರಾಯಣ ಗೌಡ, ಹಿರೇಮಗಳೂರು ಪುಟ್ಟಸ್ವಾಮಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts