ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ
ನಾವು ಉಪಾಸನೆ ಮಾಡುವುದಕ್ಕೆ ಅನುಗುಣವಾಗಿ ದೇವರು ನಮಗೆ ಪ್ರತಿಫಲ ನೀಡುತ್ತಾನೆ ಎಂದು ಪೇಜಾವರ ಅಧೋಕ್ಷಜ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು.
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಪ್ರತಿಷ್ಠಾಪನಾ ಬ್ರಹ್ಮಕಲಶೋತ್ಸವ ಅಂಗವಾಗಿ ಸಾನ್ನಿಧ್ಯಾಭಿವೃದ್ಧಿ ಮತ್ತು ನವದುರ್ಗಾ ಲೇಖನ ಯಜ್ಞದ ಪ್ರಯುಕ್ತ ಮಂಗಳವಾರ ನವಚಂಡಿಯಾಗ ಧಾರ್ಮಿಕ ಸಭೆ ಉದ್ಘಾಟಿಸಿ ಆಶೀರ್ವಚನ ನೀಡಿದರು.
ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರಧಾನ ತಂತ್ರಿ ಕೊರಂಗ್ರಪಾಡಿ ಕುಮಾರಗುರು ಶುಭಹಾರೈಸಿದರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಎಸ್‌ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಮಾತನಾಡಿದರು. ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ತಹಸೀಲ್ದಾರ್ ಪ್ರತಿಭಾ ಆರ್., ಪ್ರಮುಖರಾದ ತೋನ್ಸೆ ಆನಂದ ಶೆಟ್ಟಿ, ಪ್ರಭಾಕರ ಶೆಟ್ಟಿ, ಕೃಷ್ಣ ವೈ.ಶೆಟ್ಟಿ, ಸಂತೋಷ್ ಶೆಟ್ಟಿ, ಮಲ್ಲಾರು ಶಶಿಧರ ಶೆಟ್ಟಿ, ಮಲ್ಲಾರು ದಿವಾಕರ ಶೆಟ್ಟಿ, ಮನೋಹರ ಎಸ್.ಶೆಟ್ಟಿ, ಕಾಪು ದಿವಾಕರ ಶೆಟ್ಟಿ, ದೇವಿಪ್ರಸಾದ್ ಶೆಟ್ಟಿ ಬೆಳಪು, ಕೆ.ರವಿಕಿರಣ್, ಕೃಷ್ಣ ಪ್ರಸಾದ್, ಉದಯ್ ಕುಮಾರ್ ಶೆಟ್ಟಿ ಮುನಿಯಾಲು, ಕೆ.ವಿಶ್ವನಾಥ್, ಸಂದೀಪ್ ಕುಮಾರ್ ಮಂಜ, ಸುವರ್ಧನ ನಾಯಕ್, ಗೀತಾಂಜಲಿ ಎಂ.ಸುವರ್ಣ, ಸಾವಿತ್ರಿ ಗಣೇಶ್ ಉಪಸ್ಥಿತರಿದ್ದರು.

ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ ಪ್ರಸ್ತಾವನೆಗೈದರು. ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷ ಕೆ.ರಘುಪತಿ ಭಟ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಯೋಗೀಶ್ ಶೆಟ್ಟಿ ಬಾಲಾಜಿ ವಂದಿಸಿದರು. ದಾಮೋದರ ಶರ್ಮ ಕಾರ್ಯಕ್ರಮ ನಿರೂಪಿಸಿದರು.
ನವದುರ್ಗಾ ಲೇಖನ ಬರೆದು ಶಿಲಾ ಸೇವೆ ನೀಡುವ ಮೂಲಕ ಅಮ್ಮನಿಗೆ ಅರ್ಪಿಸಿದಾಗ ನಮ್ಮ ಹೆಸರು ಶಿಲಾ ಶಾಸನವಾಗಿ ಕಾಪು ಮಾರಿಗುಡಿ ಕ್ಷೇತ್ರದಲ್ಲಿ ಸ್ಥಿರವಾಗಿ ಉಳಿಯುತ್ತದೆ.
-ಕೊರಂಗ್ರಪಾಡಿ ಕುಮಾರಗುರು ತಂತ್ರಿ ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರಧಾನ ತಂತ್ರಿ