More

  ಕಂಬಕ್ಕೆ ಬೈಕ್ ಡಿಕ್ಕಿಹೊಡದು ಸವಾರ ಸಾವು

  ಚಾಮರಾಜನಗರ: ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟ ಗೋಪಿನಾಥಂ ಮಾರ್ಗಮಧ್ಯೆ ಬುಧವಾರ ರಾತ್ರಿ ಬೈಕ್ ಸವಾರ ಆಯತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಮೃತಪಟ್ಟಿದ್ದಾನೆ.


  ಗೋಪಿನಾಥಂ ಗ್ರಾಮದ ಪಟ್ಟಗಾರ ಮುರುಗೇಶ್ ಪುತ್ರ ತಮಿಳ್ (25) ಮೃತ. ಈತ ಕಾರ್ಯನಿಮಿತ್ತ ಬೈಕ್‌ನಲ್ಲಿ ಮಹದೇಶ್ವರಬೆಟ್ಟಕ್ಕೆ ಆಗಮಿಸಿ ರಾತ್ರಿ ಗ್ರಾಮಕ್ಕೆ ವಾಪಾಸಾಗುತ್ತಿದ್ದ ವೇಳೆ ಮಾರ್ಗ ಮಧ್ಯೆ 7ನೇ ತಿರುವಿನಲ್ಲಿ ಆಯತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.


  ಮ.ಬೆಟ್ಟದ ಪೊಲೀಸರು ಸ್ಥಳಕ್ಕೆ ಆಗಮಿಸಿ, ಮೃತ ದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ನಂತರ ವಾರಸುದಾರರಿಗೆ ಒಪ್ಪಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts