More

    ಸಂಸ್ಕೃತಿ ಉಳಿಯಲು ಎಲ್ಲ ಜನಾಂಗಗಳ ಪಾತ್ರ ದೊಡ್ಡದು

    ನಾಪೋಕ್ಲು: ಜಿಲ್ಲೆಯ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಪ್ರತಿಯೊಂದು ಜನಾಂಗದ ಪಾತ್ರವೂ ಪ್ರಮುಖವಾದದು ಎಂದು ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು.

    ಕಕ್ಕಬೆ ಪ್ರೌಢಶಾಲಾ ಆಟದ ಮೈದಾನದಲ್ಲಿ ಕೊಡಗು ಕಣಿಯ ವಿದ್ಯಾ ಅಭಿವೃದ್ಧಿ ಸಂಘದ ವತಿಯಿಂದ ಭಾನುವಾರ ಆಯೋಜಿಸಿದ್ದ ಕಣಿಯ ಜನಾಂಗದ ವಾರ್ಷಿಕ ಕ್ರೀಡಾಕೂಟ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

    ಮೇಧ ಹಾಗೂ ಕಣಿಯ ಜನಾಂಗದವರು ಕಡಿಮೆ ಸಂಖ್ಯೆಯಲ್ಲಿ ಇದ್ದರೂ ಒಗ್ಗಟ್ಟಿನಿಂದ ಕ್ರೀಡಾಕೂಟ ಆಯೋಜನೆ ಮಾಡುತ್ತಾ ಬಂದಿರುವುದು ಸಂತಸದ ವಿಷಯ. ಸಂಘಟನೆಯನ್ನು ಗಟ್ಟಿಗೊಳಿಸುವಲ್ಲಿ ಸಮುದಾಯದವರು ಒತ್ತು ನೀಡುವಂತಾಗಲಿ ಎಂದರು.

    ಕಣಿಯ ವಿದ್ಯಾ ಅಭಿವೃದ್ಧಿ ಸಂಘದ ಅಧ್ಯಕ್ಷ ಚೆಂದುವಂಡ ದೇವಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಡಾ.ಮೇಚಿರ ಸುಭಾಷ್ ನಾಣಯ್ಯ, ಕೆಡಿಪಿ ಸದಸ್ಯ ಬಾಚಮಂಡ ಲವ ಚಿಣ್ನಪ್ಪ, ಕುಡಿಯರ ಮುತ್ತಪ್ಪ, ಕಣಿಯರ ನಾಣಯ್ಯ ಇತರರು ಇದ್ದರು.

    ಮಹಿಳೆಯರು, ಮಕ್ಕಳು, ಪುರುಷರಿಗೆ ಪ್ರತ್ಯೇಕವಾಗಿ ವಿವಿಧ ಸ್ಪರ್ಧೆ ಆಯೋಜಿಸಲಾಗಿತ್ತು. ಸಮುದಾಯದವರು ಕ್ರೀಡಾಕೂಟದಲ್ಲಿ ಪಾಲ್ಗೊಂಡು ಸಂಭ್ರಮಪಟ್ಟರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts