

ಹೆಬ್ರಿ: ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಣದ ಜತೆಗೆ ಪಠ್ಯೇತರ ಚಟುವಟಿಕೆಗಳ ಪಾತ್ರವೂ ಮುಖ್ಯ. ಎಲ್ಲ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡಾಗ ನಾವು ಬೆಳೆಯಲು ಸಾಧ್ಯ. ಶಿಸ್ತು, ನಾಯಕತ್ವ ಗುಣ, ಸೇವಾ ಮನೋಭಾವ, ಆದರ್ಶ ವ್ಯಕ್ತಿತ್ವ ಬೆಳೆಸಿಕೊಳ್ಳಲು ಸಂಘಗಳ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕು ಎಂದು ಮುಖ್ಯಶಿಕ್ಷಕಿ ಸ್ನೇಹಲತಾ ಟಿ.ಜಿ. ಹೇಳಿದರು.
ಮುದ್ರಾಡಿಯ ಎಂ.ಎನ್.ಡಿ.ಎಸ್.ಎಂ. ಅನುದಾನಿತ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರ, ವಿವಿಧ ಸಂಘ ಉದ್ಘಾಟಿಸಿ ಮಾತನಾಡಿದರು. ಮುಖ್ಯಶಿಕ್ಷಕ ಚಂದ್ರಶೇಖರ ಭಟ್ ಪ್ರತಿಜ್ಞಾ ವಿಧಿ ಬೋಧಿಸಿದರು. ಸಾಧಕ ವಿದ್ಯಾರ್ಥಿಗಳಾದ ಶೋಭಿತ್ ಯು.ಪೂಜಾರಿ, ಪ್ರತೀಕ್ಷಾ ಕುಲಾಲ್, ಕಾರ್ತಿಕ್, ಅಂಜಲಿ, ಪ್ರತೀಕ್ ಅವರನ್ನು ಗೌರವಿಸಲಾಯಿತು. ವಿದ್ಯಾಸಾಗರ ಎಜುಕೇಶನ್ ಟ್ರಸ್ಟ್ ಕಾರ್ಯದರ್ಶಿ ಅಶೋಕ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ರಕ್ಷಕ-ಶಿಕ್ಷಕ ಸಂಘ ಅಧ್ಯಕ್ಷ ಸುರೇಶ್ ಕುಲಾಲ್, ವಿದ್ಯಾರ್ಥಿ ನಾಯಕ ಕಾರ್ತಿಕ್, ಶಿಕ್ಷಕಿ ಶ್ಯಾಮಲಾ ಉಪಸ್ಥಿತರಿದ್ದರು. ಕನ್ನಡ ಅಧ್ಯಾಪಕ ಪಿ.ವಿ.ಆನಂದ ಸಾಲಿಗ್ರಾಮ ಕಾರ್ಯಕ್ರಮ ನಿರೂಪಿಸಿದರು. ಮುಖ್ಯಶಿಕ್ಷಕ ಚಂದ್ರಶೇಖರ ಭಟ್ ಸ್ವಾಗತಿಸಿದರು. ಹಿರಿಯ ಶಿಕ್ಷಕ ಮಹೇಶ ನಾಯ್ಕ ಕೆ. ವಂದಿಸಿದರು. ವಿದ್ಯಾರ್ಥಿ ಸಂಘದ ಮಾರ್ಗದರ್ಶಿ ಶಿಕ್ಷಕರಾದ ರಘುಪತಿ ಹೆಬ್ಬಾರ್, ಚಂದ್ರಕಾಂತಿ ಹೆಗ್ಡೆ, ಮಹೇಶ ಎಂ.ಸಹಕರಿಸಿದರು.