More

    ಶಾಸಕ ಎಂ.ಆರ್. ಪಾಟೀಲ ಅಭಿಪ್ರಾಯ; ಆರ್ಥಿಕ ಬೆಳವಣಿಗೆಯಲ್ಲಿ ಹಾಲು ಉತ್ಪಾದಕರ ಪಾತ್ರ ನಿರ್ಣಾಯಕ

    ಧಾರವಾಡ: ಗ್ರಾಮೀಣ ಭಾಗದ ಆರ್ಥಿಕ ಬೆಳವಣಿಗೆಯಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘಗಳು ನಿರ್ಣಾಯಕ ಪಾತ್ರ ನಿರ್ವಹಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಆಡಳಿತ ಮಂಡಳಿ ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ಕುಂದಗೋಳ ಶಾಸಕ ಎಂ.ಆರ್. ಪಾಟೀಲ ಹೇಳಿದರು.
    ನಗರದ ಹಾಲು ಒಕ್ಕೂಟದ ನಂದಿನಿ ಸಭಾಂಗಣದಲ್ಲಿ ಕರ್ನಾಟಕ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್ ಆಶ್ರಯದಲ್ಲಿ ಹುಬ್ಬಳ್ಳಿ ಮತ್ತು ಕುಂದಗೋಳ ತಾಲೂಕಿನ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಾಹಕರಿಗೆ ಇತ್ತೀಚೆಗೆ ಆಯೋಜಿಸಿದ್ದ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದÀರು.
    ದೇಶದ ಸಹಕಾರಿ ವಲಯದಲ್ಲಿನ ಹಾಲು ಉತ್ಪಾದಕರ ಸಹಕಾರಿ ಸಂಘಗಳು ಗ್ರಾಮೀಣ ಭಾಗಕ್ಕೆ ನೀಡಿದ ಕೊಡುಗೆ ಅಪಾರ. ಆದ್ದರಿಂದ ಹಾಲು ಉತ್ಪಾದಕರ ಸಹಕಾರಿ ಸಂಘಗಳು ಆರ್ಥಿಕವಾಗಿ ಸದೃಢವಾಗಿ, ಗ್ರಾಮೀಣ ಜನರ ಬದುಕಿಗೆ ಆಸರೆಯಾಗುವ ಮುಖಾಂತರ ಗತವೈಭವಕ್ಕೆ ಮರಳಬೇಕು. ಈ ದಿಸೆಯಲ್ಲಿ ಸಹಕಾರ ಸಂಘಗಳ ಆಡಳಿತ ಮಂಡಳಿ ಶಕ್ತಿ ಮೀರಿ ಶ್ರಮಿಸಬೇಕು ಎಂದರು.
    ಯೂನಿಯನ್ ನಿರ್ದೇಶಕ ಮಲ್ಲಿಕಾರ್ಜುನ ಹೊರಕೇರಿ ಮಾತನಾಡಿ, ಸಹಕಾರಿ ಸಂಸ್ಥೆಗಳು ರಾಷ್ಟçದಲ್ಲಿ ವಿಶಾಲವಾದ ಸಾಮಾಜಿಕ ತಳಹದಿ ಹೊಂದಿವೆ. ಅವು ಸಮಾಜದ ಎಲ್ಲ ವರ್ಗದ ಜನತೆಯ ಅಶೋತ್ತರಗಳಿಗೆ ಸ್ಪಂದಿಸುತ್ತಿವೆ. ಇಂತಹ ತರಬೇತಿಗಳಲ್ಲಿ ಸಿಬ್ಬಂದಿ ಭಾವಹಿಸಿ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.
    ಧಾರವಾಡ ಸಹಕಾರ ಹಾಲು ಒಕ್ಕೂಟದ ಅಧ್ಯಕ್ಷ ಶಂಕರ ಮುಗದ ಮಾತನಾಡಿ, ಸಹಕಾರ ಕ್ಷೇತ್ರದಿಂದ ರೈತರ ಅಭಿವೃದ್ಧಿ ಸಾಧ್ಯ ಎಂದರು.
    ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಶಂಕರಪ್ಪ ರಾಯನಾಳ ಅಧ್ಯಕ್ಷತೆ ವಹಿಸಿದ್ದರು. ಸುರೇಶ ಬಣವಿ, ಗೀತಾ ಮರಲಿಂಗಣ್ಣವರ, ಉಮೇಶ ಹೆಬಸೂರ, ರಾಮಣ್ಣ ಕನಾಜಿ, ವ್ಯವಸ್ಥಾಪಕ ನಿರ್ದೇಶಕ ಎನ್.ಎಸ್. ಕೋಡಿಯಾಲಮಠ ಉಪಸ್ಥಿತರಿದ್ದರÀÄ.
    ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಽಕಾರಿ ಸವಿತಾ ಹಿರೇಮಠ ಸ್ವಾಗತಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ವಿ.ಜಿ. ಕುಲಕರ್ಣಿ ಮತ್ತು ಡಾ. ವೀರೇಶ ತರಲಿ ಉಪನ್ಯಾಸ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts