ನೈತಿಕ ವಿಕಾಸಕ್ಕೆ ದೈಹಿಕ ಶಿಕ್ಷಣ ಶಿಕ್ಷಕರ ಪಾತ್ರ ಹಿರಿದು

karyagara
ಕಾರ್ಯಾಗಾರವನ್ನು ಶಾಸಕ ಯಶ್‌ಪಾಲ್ ಸುವರ್ಣ ಉದ್ಘಾಟಿಸಿದರು.
Published on

ಕುಂದಾಪುರ: ವಿದ್ಯಾರ್ಥಿಗಳ ಶಾರೀರಿಕ ಬೌದ್ಧಿಕ ಸಾವಾಜಿಕ ನೈತಿಕ ವಿಕಾಸಕ್ಕೆ ದೈಹಿಕ ಶಿಕ್ಷಣ ಶಿಕ್ಷಕರ ಪಾತ್ರ ಹಿರಿದು ಮಗುವಿನ ಸವಾರ್ಂಗೀಣ ಬೆಳವಣಿಗೆ ವಾಡುವುದೇ ಶಿಕ್ಷಣದ ಗುರಿ ಆದ್ದರಿಂದಲೇ ದೈಹಿಕ ಶಿಕ್ಷಣ ಕ್ಷೇತ್ರವನ್ನು ಶಿಕ್ಷಣದ ಅವಿಭಾಜ್ಯ ಅಂಗ ಎಂದು ಪರಿಗಣಿಸಲಾಗಿದೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಹೇಳಿದರು.

ಕರ್ನಾಟಕ ರಾಜ್ಯ ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಕರ ಸಂದ ಉಡುಪಿ ಜಿಲ್ಲಾ ಶಾಖೆಯ ಆಶ್ರಯದಲ್ಲಿ ಉಡುಪಿ ಒಳಕಾಡು ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ನಡೆದ ಉಡುಪಿ ಜಿಲ್ಲಾ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಲೋಕೇಶ್ ವಾತನಾಡಿದರು. ಉಡುಪಿ ಡಯಟ್‌ನ ಪ್ರಾಂಶುಪಾಲ ಅಶೋಕ್ ಕಾಮತ್ ಮಾತನಾಡಿದರು.

ಉಡುಪಿ ಜಿಲ್ಲಾ ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಕರ ಸಂದ ಜಿಲ್ಲಾಧ್ಯಕ್ಷ ಕುಸುವಾಕರ್ ಶೆಟ್ಟಿ ಕಾರ್ಯಾಗಾರದ ಅವಶ್ಯಕತೆ ಮತ್ತು ರೂಪುರೇಷೆಗಳನ್ನು ತಿಳಿಸಿದರು. ಸಂದ ರಾಜ್ಯಾಧ್ಯಕ್ಷ ಗಿರೀಶ್ ನಾಯಕ್ ಅವರು, ಸದನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಪರ ಧ್ವನಿ ಎತ್ತಬೇಕೆಂದು ಮನವಿ ಮಾಡಿ ಬೇಡಿಕೆ ಪತ್ರವನ್ನು ಶಾಸಕ ಯಶ್‌ಪಾಲ್ ಸುವರ್ಣ ಅವರಿಗೆ ಹಸ್ತಾಂತರಿಸಿದರು.

ಉಡುಪಿ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಚಂದ್ರಶೇಖರ್ ಶೆಟ್ಟಿ, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಎಲ್ಲಮ್ಮ, ಒಳಕಾಡು ಪ್ರೌಢಶಾಲೆ ಮುಖ್ಯಶಿಕ್ಷಕಿ ಪೂರ್ಣಿವಾ, ಯುವಜನ ಸೇವಾ ಕ್ರೀಡಾಧಿಕಾರಿ ರಿತೇಶ್ ಶೆಟ್ಟಿ, ವಸಂತ ಜೋಗಿ, ಉಡುಪಿ ಜಿಲ್ಲಾ ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಕರ ಸಂದ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಸುವರ್ಣ, ಡಾ.ಶೋಭಿತ್ ಶೆಟ್ಟಿ ಮತ್ತು ರಾಷ್ಟ್ರೀಯ ಚೆಸ್ ತೀರ್ಪುಗಾರ ಸಾಕ್ಷತ್, ಐದು ವಲಯದ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾದ ರವಿಚಂದ್ರ ಕಾರಂತ್, ಸತ್ಯನಾರಾಯಣ, ವಿಜಯ್ ಕುವಾರ್ ಶೆಟ್ಟಿ, ರವೀಂದ್ರ ನಾಯ್ಕ, ನಿತ್ಯಾನಂದ ಶೆಟ್ಟಿ ಉಪಸ್ಥಿತರಿದ್ದರು. ಉದಯ ಮಡಿವಾಳ ಎಂ.ಸ್ವಾಗತಿಸಿ, ಮಂಜುನಾಥ್ ಶೆಟ್ಟಿ ವಂದಿಸಿದರು. ವರದರಾಜ್ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net