More

    ಮಕ್ಕಳನ್ನು ಸತ್ಪ್ರಜೆಯನ್ನಾರಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಆಗಾದ

    ಮಸ್ಕಿ: ಮಕ್ಕಳಿಗೆ ಉತ್ತಮ ಶಿಕ್ಷಣ, ಸಂಸ್ಕಾರ ಕಲಿಸಿ, ಸಮಾಜದಲ್ಲಿ ಸತ್ಪ್ರಜೆಗಳನ್ನಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವವಾದದ್ದು ಎಂದು ಶಾಸಕ ಆರ್.ಬಸನಗೌಡ ತುರ್ವಿಹಾಳ ಹೇಳಿದರು.

    ಇದನ್ನೂ ಓದಿ: ಖಾಸಗಿ ಶಿಕ್ಷಕರ ಪರ ಸದನದಲ್ಲಿ ಧ್ವನಿ ಎತ್ತುವೆ

    ಪಟ್ಟಣದ ಭ್ರಮರಂಬ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಭಾನುವಾರ ಕರ್ನಾಟಕ ರಾಜ್ಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಸಂಘ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮಸ್ಕಿ ತಾಲೂಕು ಘಟಕ ಹಾಗೂ ವಿವಿಧ ವೃಂದ ಸಂಘಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಶಿಕ್ಷಕರ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

    ಸಮಾಜದಲ್ಲಿ ಶಿಕ್ಷಕ ವೃತ್ತಿಗೆ ಹೆಚ್ಚಿನ ಗೌರವವಿದೆ. ಶಿಕ್ಷಣ ಒಬ್ಬ ಮನುಷ್ಯನ ಜೀವನವನ್ನೇ ಬದಲಿಸುತ್ತದೆ. ಶಿಕ್ಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದರೆ ದೇಶ ಸಧೃಡವಾಗುತ್ತದೆ ಎಂದರು.

    ಮಾಜಿ ಎಂಎಲ್ಸಿ ಶರಣಪ್ಪ ಮಟ್ಟೂರು ಮಾತನಾಡಿ, ಮಸ್ಕಿ ತಾಲೂಕಿನಲ್ಲಿ ಗುರು ಭವನದ ಅವಶ್ಯಕತೆ ಇದ್ದು ತಾಲೂಕು ಆಡಳಿತ ಹಾಗೂ ಶಾಸಕರ ಭವನ ನಿರ್ಮಾಣಕ್ಕೆ 2 ಎಕರೆ ಜಮೀನು , ಕಟ್ಟಡ ನಿರ್ಮಾಣಕ್ಕೆ ಹಣ ಮಂಜೂರು ಮಾಡಬೇಕು ಎಂದರು.

    ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ಪಟ್ಟಣದ ಗಾಂಧಿನಗರದಿಂದ ಸಭೆ ನಡೆಯುವ ಸ್ಥಳದವರೆಗೆ ಅದ್ದೂರಿಯಾಗಿ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳ ನೃತ್ಯ ಸಾರ್ವಜನಿಕರ ಗಮನ ಸೆಳೆದವು.

    ಮಸ್ಕಿ ತಾಲೂಕಿನಲ್ಲಿ ಉತ್ತಮ ಶಿಕ್ಷಕರಿಗೆ ತಾಲೂಕು ಸಂಘದಿಂದ 26 ಜನ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ತಹಸೀಲ್ದಾರ್ ಅರಮನೆ ಸುಧಾ, ಉಪನ್ಯಾಸಕ ಮಹಾಂತೇಶ್ ಮಸ್ಕಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮಸ್ಕಿ ತಾಲೂಕು ಅಧ್ಯಕ್ಷ ಶಂಕರಗೌಡ ಪಾಟೀಲ್, ಪ್ರೌಢ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಪಂಪಾಪತಿ ಹೂಗಾರ್, ನೀರಾವರಿ ಇಲಾಖೆಯ ಮಲ್ಲಯ್ಯ ಕಟ್ಟಿಮನಿ ಇದ್ದರು.

    ಕಾಂಗ್ರೆಸ್-ಬಿಜೆಪಿ ಸೇರಿದಂತೆ ಯಾವುದೇ ಪಕ್ಷಗಳಾಗಲಿ ರಾಜ್ಯದಲ್ಲಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವದಕ್ಕೆ ಮಹತ್ವ ಕೊಡಬೇಕೆ ವಿನಃ ಬಿಟ್ಟಿ ಭಾಗ್ಯಗಳನ್ನು ಕೊಟ್ಟರೆ, ಅದರಿಂದ ಏನೂ ಪ್ರಯೋಜನವಾಗದು. ಇತ್ತಿಚಿನ ದಿನಗಳಲ್ಲಿ ಆಡಳಿತಕ್ಕೆ ಬಂದ ಒಂದೊಂದು ಸರ್ಕಾರಗಳು ತಮಗೆ ಇಷ್ಟ ಬಂದಂತೆ ಶಿಕ್ಷಣದ ನೀತಿಯನ್ನು ಬದಲಿಸಿ ಸಮಾಜದಲ್ಲಿ ಗೊಂದಲಗಳನ್ನು ಸೃಷ್ಟಿಸುತ್ತಿವೆ.

    ಪ್ರತಾಪಗೌಡ ಪಾಟೀಲ್,

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts